ಮುಂಬಯಿ: ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 4 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಮತ್ತು 36 ರನ್ಗಳ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಮುನ್ನಡೆಯೊಂದಿಗೆ ಸರಣಿ ತನ್ನದಾಗಿಸಿದೆ.
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನ್ನಿಂಗ್ಸ್ನಲ್ಲಿ 400 ರನ್ ಪೇರಿಸಿದೆ. ಇದಕ್ಕುತ್ತರವಾಗಿ ಭಾರತ ತನ್ನ ಪ್ರಥಮ ಇನ್ನಿಂಗ್ಸ್ನಲ್ಲಿ 631 ಪೇರಿಸಿ 231 ರನ್ಗಳ ಮುನ್ನಡೆ ಸಾಧಿಸಿತ್ತು. ತನ್ನ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 195 ರನ್ ಗಳಿಸಿದ ಇಂಗ್ಲೆಂಡ್ ಭಾರತದ ಸ್ಪಿನ್ ದಾಳಿಗೆ ಶರಣಾಯಿತು.
ಭಾರತದ ಪರ ಕಪ್ತಾನ ವಿರಾಟ್ ಕೊಹ್ಲಿ (235) ದ್ವಿಶತಕ ಬಾರಿಸಿದರೆ, ಮುರಳಿ ವಿಜಯ್ 136 ಹಾಗೂ ಜಯಂತ್ ಯಾದವ್ 104 ರನ್ ಬಾರಿಸಿದರು. ಆಫ್ ಸ್ಪಿನ್ನರ್ ಆರ್. ಅಶ್ವಿನ್ ಪಂದ್ಯದಲ್ಲಿ 10 ವಿಕೆಟ್ ಪಡೆದರು.
ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.
ಇದು ವಿರಾಟ್ ಕೊಹ್ಲಿ ಅವರ 2016ನೇ ವರ್ಷದ ಮೂರನೇ ದ್ವಿಶತಕವಾಗಿದೆ. ಆರ್.ಆಶ್ವಿನ್ ಭಾರತದ ಪರ ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ಬಾರಿ 10 ವಿಕಟ್ ಪಡೆದವರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ಅನಿಲ್ ಕುಂಬ್ಳೆ ನಂತರದ ಸ್ಥಾನದಲ್ಲಿದ್ದಾರೆ. ಅಶ್ವಿನ್ ಈಗಾಗಲೇ 7 ಬಾರಿ 10 ವಿಕೆಟ್ ಪಡೆದರೆ ಅನಿಲ್ ಕುಂಬ್ಳೆ 8 ಬಾರಿ ಈ ಸಾಧನೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.