ನವದೆಹಲಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಕಟ್ಟಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವ ನಡುವೆಯೇ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರು ಮೇ 6 ರಂದು ಮಹತ್ವದ ಸಭೆಯನ್ನು ಕರೆದಿದ್ದಾರೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯರು, ಕಾಂಗ್ರೆಸ್ ಸಂಸದರುಗಳು ಬುಧವಾರ ನವದೆಹಲಿಯಲ್ಲಿನ ಸೋನಿಯಾ ಗಾಂಧಿಯವರ ನಿವಾಸದಲ್ಲಿ ಸಭೆ ಸೇರಲಿದ್ದಾರೆ ಮತ್ತು ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.
ಈ ಮಹತ್ವದ ಸಭೆಯ ಅಜೆಂಡಾ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ರಾಹುಲ್ ಗಾಂಧಿಗೆ ಪಟ್ಟ ಕಟ್ಟುವ ಬಗ್ಗೆ ಇಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಇನ್ನೊಂದೆಡೆ ರಾಜ್ಯಸಭಾದ 68 ಮತ್ತು ಲೋಕಸಭೆಯ 44 ಕಾಂಗ್ರೆಸ್ ಸಂಸದರುಗಳು ಮೇ 6ರ ಮೊದಲು ಸೋನಿಯಾ ಅವರೊಂದಿಗೆ ಪ್ರತ್ಯೇಕ ಸಭೆ ಏರ್ಪಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.