ನ್ಯೂಯಾರ್ಕ್ : ಟೈಮ್ಸ್ ವರ್ಷದ ವ್ಯಕ್ತಿ-2016 ಆಯ್ಕೆಯಲ್ಲಿ ಓದುಗರ ಅಭಿಮತದಿಂದ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಪ್ರತಿಷ್ಠಿತ ಫೋರ್ಬ್ಸ್ ಪತ್ರಿಕೆಯ ‘ಜಗತ್ತಿನ 10 ಜನ ಪ್ರಭಾವಿ ವ್ಯಕ್ತಿ’ಗಳಲ್ಲಿ ಸ್ಥಾನ ಪಡೆದಿದ್ದಾರೆ.
74 ಜನರ ವಿಶ್ವದ ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಫೋರ್ಬ್ಸ್ ಬಿಡುಗಡೆ ಮಾಡಿದ್ದು, ವಿಶ್ವದ ಅತ್ಯಂತ ಪ್ರಭಾವಿ 10 ಜನರಲ್ಲಿ ಪ್ರಧಾನಿ ಮೋದಿ ಒಬ್ಬರಾಗಿದ್ದು, 9 ನೇ ಸ್ಥಾನ ಪಡೆದಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸತತ 4 ನೇ ವರ್ಷ ಮೊದಲ ಸ್ಥಾನದಲ್ಲಿದ್ದು, ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2 ನೇ ಸ್ಥಾನದಲ್ಲಿದ್ದಾರೆ. ಜರ್ಮನಿಯ ಚಾನ್ಸ್ಲರ್ ಏಂಜೀಲಾ ಮಾರ್ಕೆಲ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಧಾನಿ ಮೋದಿಯವರನ್ನು ಭಾರತದಲ್ಲಿ 1.3 ಮಿಲಿಯನ್ಗೂ ಹೆಚ್ಚು ಜನರು ಇಷ್ಟಪಡುತ್ತಾರೆ ಎಂದು ಫೋರ್ಬ್ಸ್ ಹೇಳಿದ್ದಲ್ಲದೆ, ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ನೋಟು ರದ್ದತಿ ಕ್ರಮದಿಂದ ಮೋದಿ ಬಹುಜನಪ್ರಿಯತೆಗಳಿಸಿದ್ದು, ವಿದೇಶಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಮೋದಿಯವರು ಜಾಗತಿಕ ನಾಯಕನಾಗಿ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದಾರೆ. ಹವಾಮಾನ ವೈಪರೀತ್ಯ ಕುರಿತಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಕ್ರಮವೂ ಕೂಡಾ ಅವರ ಜನಪ್ರಿಯತೆಗೆ ಸಹಕಾರಿಯಾಗಿದೆ ಎಂದು ಫೋರ್ಬ್ಸ್ ಮ್ಯಾಗಜಿನ್ ಅಭಿಪ್ರಾಯಪಟ್ಟಿದೆ.
ಕಳೆದ ವರ್ಷದ 3ನೇ ಸ್ಥಾನ ಪಡೆದುಕೊಂಡಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಈ ಬಾರಿ 48ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.