ನವದೆಹಲಿ: ಬಿಜೆಪಿ ಸಂಸದೀಯ ಸಭೆಯಲ್ಲಿ ನಗದು ರಹಿತ ಆರ್ಥಿಕತೆಗೆ ಒತ್ತು ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನರು ಕಪ್ಪು ಹಣ ಮತ್ತು ಭ್ರಷ್ಟಾಚಾರ ನಿಗ್ರಹಿಸಲು ಡಿಜಿಟಲ್ ಆರ್ಥಿಕತೆಯನ್ನು ತಮ್ಮ ಜೀವನದ ಒಂದು ಭಾಗವಾಗಿಸುವಂತೆ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ ಅವರು, ಕಾಂಗ್ರೆಸ್ಗೆ ದೇಶಕ್ಕಿಂತ ಪಕ್ಷವೇ ಮೇಲು. ರಾಷ್ಟ್ರದ ಹಿತಾಸಕ್ತಿಗಿಂತ ಪಕ್ಷದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದೆ. ಆದರೆ ನಮ್ಮ ಪಕ್ಷ ಇದಕ್ಕೆ ಭಿನ್ನವಾಗಿದ್ದು, ನಮಗೆ ಪಕ್ಷಕ್ಕಿಂತ ದೇಶವೇ ಸರ್ವೋಚ್ಚ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಭ್ರಷ್ಟಾಚಾರ ನಿರ್ಮೂಲನೆ ಹೋರಾಟಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ತೋರಿದ ಅವರು, ಹಿಂದೆ ಕಾಂಗ್ರೆಸ್ ಸರ್ಕಾರ ಜನರಿಗೆ ವಂಚನೆ ಮಾಡುತ್ತಿರುವುದನ್ನು ಬಿಜೆಪಿ ವಿರೋಧಿಸುತ್ತಿತ್ತು. ಈಗ ಬಿಜೆಪಿ ಸರ್ಕಾರ ಕಪ್ಪು ಹಣ ನಿರ್ಮೂಲನೆಗೆ ಹೋರಾಡುತ್ತಿದ್ದರೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಹೇಳಿದ್ದಾರೆ.
ಬಿಜೆಪಿ ಸಂಸದರು ತಮ್ಮ ಕ್ಷೇತ್ರದಲ್ಲಿ ನಗದು ರಹಿತ ಆರ್ಥಿಕತೆಯ ಪ್ರಯೋಜನಗಳ ಬಗ್ಗೆ ಜನರಿಗೆ ಮಾಹಿತಿ ನೀಡುವಂತೆ ಸೂಚಿಸಿದ ಪ್ರಧಾನಿ ಮೋದಿ ಅವರು, ಅನಾಣ್ಯೀಕರಣ ರೀತಿಯ ಕಠಿಣ ಕ್ರಮಗಳನ್ನು ಸರ್ಕಾರ ಕೈಗೊಳ್ಳಲು ಮುಖ್ಯ ಕಾರಣಗಳನ್ನು ತಿಳಿಸುವಂತೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.