ಲಕ್ನೋ : ಭಾರತ ತಂಡವು ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ವಿಶ್ವಕಪ್ನ್ನು ತನ್ನದಾಗಿಸಿಕೊಂಡಿದೆ. 15 ವರ್ಷಗಳ ಬಳಿಕ ವಿಶ್ವಕಪ್ ಜಯಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಹರ್ಜಿತ್ ಸಿಂಗ್ ಸಾರಥ್ಯದ ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ಅಂತರದಿಂದ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಭಾರತ ಜೂನಿಯರ್ ವಿಶ್ವಕಪ್ನ್ನು ತನ್ನದಾಗಿಸಿಕೊಂಡಿದೆ.
ಭಾರತ ತಂಡದ ಐತಿಹಾಸಿಕ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದಿದೆ. ಅಭಿಮಾನಿಗಳು ಟ್ವೀಟ್ ಸುರಿಮಳೆ ಹರಿಸಿದ್ದಾರೆ. ಪ್ರಧಾನಿ ಮೋದಿ ಕೂಡಾ ಪ್ರಶಂಸೆಯ ಟ್ವೀಟ್ ಮಾಡಿದ್ದಾರೆ.
‘ನಮ್ಮ ಯುವ ತಂಡದ ಮೇಲೆ ನಮಗೆ ಹೆಮ್ಮೆ ಇದೆ. ಜೂನಿಯರ್ ಹಾಕಿ ವಿಶ್ವಕಪ್ ಗೆದ್ದ ತಂಡಕ್ಕೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ.
Extremely proud of our youngsters! Congratulations to our junior hockey team for winning the #JuniorHockeyWorldCup.
— Narendra Modi (@narendramodi) December 18, 2016
ಭಾರತ ತಂಡವು 1997 ರಲ್ಲಿ ರನ್ನರ್ ಅಪ್ ಆಗಿತ್ತು. 2001 ರಲ್ಲಿ ಅರ್ಜೆಂಟೀನಾ ತಂಡವನ್ನು ಮಣಿಸಿ ಭಾರತ ತಂಡವು ಚಾಂಪಿಯನ್ ಆಗಿತ್ತು. 2005 ರಲ್ಲಿ ಸೆಮಿಫೈನಲ್ ಪ್ರವೇಶಿಸಿತ್ತು. ಇದೀಗ 15 ವರ್ಷಗಳ ಬಳಿಕ ಹರ್ಜಿತ್ ಸಿಂಗ್ ಸಾರಥ್ಯದ ಭಾರತ ತಂಡವು ಜೂನಿಯರ್ ವಿಶ್ವಕಪ್ನ್ನು ತನ್ನದಾಗಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.