ಕಾನ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ವಿವಿಧ ಉಪಕ್ರಮಗಳನ್ನು ಉದ್ಘಾಟಿಸಿದ್ದು, ಇದು ಮುಂದಿನ ಮೂರು ವರ್ಷಗಳಲ್ಲಿ ನಾಲ್ಕು ಲಕ್ಷ ಯುವಕರಿಗೆ ಉದ್ಯೋಗ ರಚಿಸಲು ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಈ ಉಪಕ್ರಮಗಳಲ್ಲಿ ಪ್ರಧಾನಮಂತ್ರಿ ಕೌಶಲ ಕೇಂದ್ರ (ಪಿಎಂಕೆಕೆ) ಮತ್ತು ಚಾಲಕ ತರಬೇತಿ ಸಂಸ್ಥೆಗಳು ಒಳಗೊಂಡಿವೆ.
ಕೇಂದ್ರದ ಯೋಜನೆಯಂತೆ ಮುಂದಿನ ಮೂರು ವರ್ಷಗಳಲ್ಲಿ ಲಕ್ಷಂತರ ಯುವಕರಿಗೆ ತರಬೇತಿ ಮತ್ತು ಉದ್ಯೋಕ ಕಲ್ಪಿಸಲು ವಿವಿಧ ಕೈಗಾರಿಕೆಗಳ ಜೊತೆ ಸರ್ಕಾರ ಸಹಭಾಗಿತ್ವ ವಹಿಸಿದೆ.
ಉದ್ಯೋಗದ ಅವಕಾಶಗಳನ್ನು ಹೆಚ್ಚಿಲು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಸಚಿವಾಲಯ ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಧಾನಮಂತ್ರಿ ಕೌಶಲ ಕೇಂದ್ರಗವನನು ಆರಂಭಿಸುವ ಯೋಜನೆ ಹೊಂದಿದೆ.
ಕಾನ್ಪುರದಲ್ಲಿ ನಡೆದ ಪರಿವರ್ತನ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ೩೧ ಕೌಶಲ್ಯ ಕೇಂದ್ರಗಳನ್ನು ಘೋಷಿಸಿದ್ದಾರೆ.
ರಾಜೀವ್ ಪ್ರತಾಪ್ ರೂಡಿ ನೇತೃತ್ವದಲ್ಲಿ ಕೌಶಲ್ಯ ಅಭಿವೃದ್ಧಿ ಸಚಿವಾಲಯ ಮತ್ತು ಸಿಂಗಾಪುರದ ತಾಂತ್ರಿಕ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಐಐಎಸ್ ಉನ್ಸ್ಟಿಟ್ಯೂಟ್ನ್ನು ಆರಂಭಿಸಲಾಗಿದೆ. ಕೌಶಲ್ಯ ಅಭಿವೃದ್ಧಿ ಸಚಿವಾಲಯ ಭಾರತದಲ್ಲಿ ಇಂತಹ ೬ ಇತರ ಸಂಸ್ಥೆಗಳನ್ನು ಆರಂಭಿಸಲು ನಿರ್ಧರಿಸಿದೆ.
ಪ್ರಧಾನಿ ಮೋದಿ ಅವರು ಕಳೆದ ಬಾರಿ ಸಿಂಗಾಪುರದ ತಾಂತ್ರಿಕ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಭಾರತದಲ್ಲಿ ಐಐಎಸ್ ಸ್ಥಾಪಿಸುವ ಕಲ್ಪನೆಯೊಂದಿಗೆ ಹೊಸ ಯೋಜನೆ ರೂಪಿಸಿದ್ದರು.
ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಯುವಕರಿಗಾಗಿ ಕಾಶಲ್ ಪ್ರದರ್ಶಿನಿ (ಕೌಶಲ್ಯ ಪ್ರದರ್ಶನ)ಯನ್ನೂ ಉದ್ಘಾಟಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.