ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದು, ಡೀಸೆಲ್ ಲೋಕೋಮೋಟಿವ್ ವರ್ಕ್ಸ್ (ಡಿಎಲ್ಡಬ್ಲೂ)ನಲ್ಲಿ ಪಕ್ಷದ ಸುಮಾರು ೨೦,೦೦೦ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ.
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಈ ಎರಡು ಪ್ರಾದೇಶಿಕ ಪ್ರತಿಸ್ಪರ್ಧಿಗಳಿರುವ ಉತ್ತರ ಪ್ರದೇಶದಲ್ಲಿ ಲೋಕಸಭಾ ಕ್ಷೇತ್ರದ ಅಡಿಯಲ್ಲಿ ಬರುವ ಎಲ್ಲಾ 5 ಶಾಸನ ಸಭೆಗಳ ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳನ್ನು ಹಿಡಿತದಲ್ಲಿಡುವಂತೆ ಪ್ರಧಾನಿ ಮೋದಿ ಸಂದೇಶ ನೀಡಲಿದ್ದಾರೆ.
ಇದು ಪ್ರಧಾನಿ ಮೋದಿ ಅವರು ಕೈಗೊಂಡಿರುವ 9ನೇ ವಾರಣಾಸಿ ಭೇಟಿಯಾಗಿದ್ದು, ಈ ವರ್ಷ ಜನವರಿ ನಂತರದ 5ನೇ ಭೇಟಿ ಇದಾಗಿದೆ.
403 ಕ್ಷೇತ್ರಗಳ ಯುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕೇವಲ ೫೦ ಶಾಸಕರನ್ನು ಹೊಂದಿದ್ದು, ತನ್ನ ಗೆಲುವಿನ ಪ್ರಯತ್ನಗಳ ಭಾಗವಾಗಿ ಪ್ರಧಾನಿ ಮೋದಿ ಅವರು ವಾರಣಾಸಿಗೆ ಭೇಟಿ ನೀಡುತ್ತಿದ್ದಾರೆ.
ಕ್ಯಾನ್ಸರ್ ಕೇಂದ್ರ, ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆ ಸೇರಿದಂತೆ ಹಲವು ಯೋಜನೆಗಳನ್ನು ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ.
ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿರುವ ಒಂದು ವಾರದ ‘ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವ’ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.