ನವದೆಹಲಿ: ಅಂಗನವಾಡಿ ಕಾರ್ಯಕರ್ತರು ತೋರಿದ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಅವರು ಇಂದು ರಾಷ್ಟ್ರೀಯ ಪ್ರಶಸ್ತಿ ನೀಡಲಿದ್ದಾರೆ.
2014-15 ಹಾಗೂ 2015-16ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ನೇಮಿಸಿದ ಸುಮಾರು 97 ಅಂಗನವಾಡಿ ಕಾರ್ಯಕರ್ತರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಶಸ್ತಿಯು ರೂ. 25 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಹೊಂದಿದೆ.
ಅಂಗನವಾಡಿ ಕಾರ್ಯಕರ್ತರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡುವ ಯೋಜನೆಯನ್ನು ಅಂದಿನ ಎನ್ಡಿಎ ಸರ್ಕಾರ 2000-2001ರಲ್ಲಿ ರೂಪಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.