ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂಬಯಿ ಕರಾವಳಿಯ ಅರಬ್ಬಿ ಸಮುದ್ರದ ದ್ವೀಪದಲ್ಲಿ 3600 ಕೋಟಿ ರೂ. ವೆಚ್ಚದ ಶಿವಾಜಿ ಸ್ಮಾರಕಕ್ಕೆ ಶನಿವಾರ ಶಿಲಾನ್ಯಾಸ ಮಾಡಲಿದ್ದಾರೆ.
ಪ್ರಧಾನಿ ಮೋದಿ ಅವರು ಗಿರ್ಗಾಂವ್ ಚೌಪಾಟಿಗೆ ಆಗಮಿಸಿ ಅಲ್ಲಿಂದ ಹೋವರ್ಕ್ರಾಫ್ಟ್ ಮೂಲಕ ದ್ವೀಪಕ್ಕೆ ತೆರಳಿ ಶಿಲಾನ್ಯಾಸ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅರಬ್ಬಿ ಸಮುದ್ರದ ದ್ವೀಪದ 15 ಹೆಕ್ಟೇರ್ ಪ್ರದೇಶದಲ್ಲಿ ಈ ಸ್ಮಾರಕವನ್ನು ನಿರ್ಮಿಸಲಾಗುತ್ತಿದ್ದು, ಸ್ಮಾರಕ 210 ಎತ್ತರವಿದೆ. ಸುಮಾರು 2500 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ನಿರ್ಮಾಣ ಕಾರ್ಯ ನಡೆಯಲಿದೆ.
ಇದೇ ವೇಳೆ ಪ್ರಧಾನಿ ಮೋದಿ ಅವರು ಎರಡು ಮೆಟ್ರೋ ರೈಲು ಯೋಜನೆ, ರೈಲ್ವೆ ಕಾರಿಡಾರ್ ಯೋಜನೆ ಹಾಗೂ ಮುಂಬಯಿ ಬಂದರು ಸಂಪರ್ಕ ಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ಶಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.