ಕಠ್ಮಂಡು: ಸಾಂಕ್ರಾಮಿಕ ರೋಗ ಹರಡುವ ಭೀತಿಯಿಂದಾಗಿ ಭೂಕಂಪ ಪೀಡಿತ ನೇಪಾಳದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿಗಳ ವಧೆಗೆ ನಿಷೇಧ ಹೇರಲಾಗಿದೆ.
ಮಾಂಸದಿಂದ ತಯಾರಿಸಿದ ಆಹಾರ ಪದಾರ್ಥಗಳನ್ನೂ ತಿನ್ನದಂತೆ ಕಠ್ಮಂಡು ಜಿಲ್ಲಾಡಳಿತ ಸಾರ್ವಜನಿಕ ಪ್ರಕಟನೆಯನ್ನು ಹೊರಡಿಸಿದೆ.
ಮಾಂಸ ಮಾರಾಟ ಮಾಡುವುದು, ಪ್ರಾಣಿಗಳನ್ನು ವಧಿಸುವುದರಿಂದ ಸ್ವಚ್ಛತೆ ಮತ್ತು ಆರೋಗ್ಯ ಸಂಬಂಧಿ ಕಾಯಿಲೆಗಳು ಹರಡುವ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಾಣಿ ಅಥವಾ ಹಕ್ಕಿಗಳನ್ನು ವಧಿಸದಂತೆ, ಅವುಗಳ ಮಾಂಸ ಮಾರಾಟ ಮಾಡದಂತೆ ಸ್ಥಳೀಯರಿಗೆ ಸೂಚನೆ ನೀಡಿದ್ದೇವೆ ಎಂದಿದ್ದಾರೆ.
ನೇಪಾಳ ಭೂಕಂಪಕ್ಕೆ 6,600 ಮಂದಿ ಮೃತರಾಗಿದ್ದಾರೆ, ಅವಶೇಷಗಳಡಿ ಇನ್ನೂ ಸಾಕಷ್ಟು ಹೆಣಗಳಿರುವ ಸಾಧ್ಯತೆ ಇದೆ. ಇದರಿಂದಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಅಲ್ಲಿ ಉದ್ಭವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.