ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮಯೂರ್ ವಿಹಾರ್ ಫೇಸ್-1, ತಿಲಕ್ ನಗರ್, ನೋಯ್ಡಾ ಸೆಕ್ಟರ್ -15 ಸೇರಿದಂತೆ 10 ಮೆಟ್ರೋ ರೈಲು ನಿಲ್ದಾಣಗಳು ಜನವರಿ 1, 2017ರಿಂದ ಸಂಪೂರ್ಣವಾಗಿ ನಗದು ರಹಿತ ವಹಿವಾಟು ನಡೆಸಲಿವೆ.
ಈ ರೈಲು ನಿಲ್ದಾಣಗಳಲ್ಲಿ ಟೋಕನ್, ಸ್ಮಾರ್ಟ್ ಕಾರ್ಡ್ ಖರೀದಿಗಳು ಹಾಗೂ ಟಾಪ್-ಅಪ್ ರೀಚಾರ್ಜ್ ವ್ಯವಹಾರಗಳು ಮೊಬೈಲ್ ವ್ಯಾಲೆಟ್, ಡಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕವೇ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಇತರ ರೈಲು ನಿಲ್ದಾಣಗಳಿಗೆ ಹೋಲಿಸಿದರೆ ಈ ರೈಲ್ವೆ ನಿಲ್ದಾಣಗಳಲ್ಲಿ ಶೇ. 70ರಷ್ಟು ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಬಳಸುತ್ತಿದ್ದು, ನಗದು ವಹಿವಾಟು ತೀರ ಕಡಿಮೆ ಸಂಖ್ಯೆಯಲ್ಲಿದೆ.
ಭಾರತವನ್ನು ಡಿಜಿಟಲ್ ಆರ್ಥಿಕತೆಯಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ದೃಷ್ಟಿಕೋನವನ್ನು ಗುರುತಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.