ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸಂದರ್ಭ ಸುಬ್ರತಾ ರಾಯ್ ಒಡೆತನದ ಸಹಾರಾ ಸಂಸ್ಥೆಯಿಂದ ರೂ. 40 ಕೋಟಿ ಹಾಗೂ ಬಿರ್ಲಾ ಕಂಪೆನಿಯಿಂದ 12 ಕೋಟಿ ರೂ. ಸೇರಿ ಒಟ್ಟು 52 ಲಂಚ ಕೋಟಿ ರೂ. ಸ್ವೀಕರಿಸಿದ್ದರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದರು.
ಈ ಸಂಬಂಧ ಕಾಂಗ್ರೆಸ್ ಪಕ್ಷ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಈ ದಾಖಲೆ ಪಟ್ಟಿಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿ ಶೀಲಾ ದೀಕ್ಷಿತ್ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದಾಗ 1 ಕೋಟಿ ರೂ. ಲಂಚ ಸ್ವೀಕರಿಸಿದ ಮಾಹಿತಿ ಕೂಡ ದೊರೆತಿದೆ.
ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಲಂಚ ಸ್ವೀಕರಿಸಿದ್ದರು ಎಂದು ಆರೋಪಿಸಿದ್ದು, ಈ ಬಗ್ಗೆ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಶುಕ್ರವಾರ ಟ್ವಿಟರ್ನಲ್ಲಿ ಪ್ರಕಟಸಿತ್ತು.
ಸಹಾರಾ ಸಂಸ್ಥೆಯಿಂದ ಲಂಚ ಪಡೆದವರ ಬಗ್ಗೆ ಕಾಂಗ್ರೆಸ್ ಪಕ್ಷದ ಸದಸ್ಯರು ಅತ್ಯುತ್ಸಾಹದಲ್ಲಿ ಪ್ರಕಟಿಸಿದ ಈ ಪಟ್ಟಿಯಲ್ಲಿ ಶೀಲಾ ದೀಕ್ಷಿತ್ ಅಲ್ಲದೇ ಕಾಂಗ್ರೆಸ್ ಆಳ್ವಿಕೆ ಸಂದರ್ಭದಲ್ಲಿ ಕಾಂಗ್ರೆಸ್ನ ಇತರ ರಾಜ್ಯಗಳ ಮುಖ್ಯಮಂತ್ರಿಗಳ ಹೆಸರು ಕೂಡ ಲಭ್ಯವಿದೆ.
ಈ ಎಲ್ಲ ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆಯಿಂದ ಪಡೆಯಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.