ತಿರುವನಂತಪುರಂ: ಕೇರಳ ರಾಜ್ಯವನ್ನು ಬಯಲು ಶೌಚ ಮುಕ್ತ ರಾಜ್ಯ ಎಂದು ಘೋಷಿಸಲಾಗಿದ್ದು, ಕೇರಳದಾದ್ಯಂತ ಸಂಚರಿಸುವ ರೈಲುಗಳಲ್ಲಿ ಜೈವಿಕ ಶೌಚಾಲಯ ಅಳವಡಿಸುವ ಬಗ್ಗೆ ರೈಲ್ವೆ ಸಚಿವ ಸುರೇಶ್ ಪ್ರಭು ಭರವಸೆ ನೀಡಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ ಹಲವು ರೈಲ್ವೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತುಕತೆ ನಡೆಸಿದ ಸಚಿವ ಸುರೇಶ್ ಪ್ರಭು, ಜೈವಿಕ ಶೌಚಾಲಯ ಅಳವಡಿಸುವ ಬಗ್ಗೆ ಭರವಸೆ ನೀಡದ್ದಾರೆ. ಅಲ್ಲದೇ ತಿರುವನಂತಪುರಂ ಮತ್ತು ದೆಹಲಿ ನಡುವೆ ಸಂಚರಿಸುತ್ತಿರುವ ರಾಜಧಾನಿ ಎಕ್ಸ್ಪ್ರೆಸ್ ರೈಲು ವಾರದಲ್ಲಿ 3ರ ಬದಲು 5 ದಿನ ಸಂಚಾರ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಯ ವಿವಿಧ ಅಂಶಗಳ ಬಗ್ಗೆ ಅಧ್ಯಯನ ನಡೆಸಲು ಸಾರ್ವಜನಿಕ ವಲಯಗಳ ಇಂಜಿನಿಯರಿಂಗ್ ಸಲಹೆಗಾರ ರೈಟ್ಸ್ಗೆ ಸೂಚಿಸಲಾಗುವುದು ಎಂದು ಪ್ರಭು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.