ನವದೆಹಲಿ: ಬಾಹ್ಯ ಶೌಚ ಮುಕ್ತ ಬ್ಲಾಕ್ಗಳಲ್ಲಿ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವ ಗುರಿಯೊಂದಿಗೆ ಸ್ವಚ್ಛ, ಸ್ವಸ್ಥ, ಸರ್ವತ್ರ ಉಪಕ್ರಮಕ್ಕೆ ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯವು ಕುಡಿಯುವ ನೀರು ಮತ್ತು ನೈರ್ಮಲ್ಯ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸಹಯೋಗದೊಂದಿಗೆ ಚಾಲನೆ ನೀಡಲಿದೆ.
ಉನ್ನತ ಮಟ್ಟದಲ್ಲಿ ಶುಚಿತ್ವ ಮತ್ತು ನೈರ್ಮಲ್ಯ ಹೊಂದಲು ದೇಶಾದ್ಯಂತ 708 ಬಾಹ್ಯ ಶೌಚ ಮುಕ್ತ ಬ್ಲಾಕ್ಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ.
ನೈರ್ಮಲ್ಯ ಹಾಗೂ ಸೋಂಕು ನಿಯಂತ್ರಣ ಗುಣಮಟ್ಟ ಹೊಂದಿ ಅಭಿವೃಧಿಪಡಿಸಲು ಪ್ರತಿ ಕೇಂದ್ರಗಳಿಗೆ ಈ ಯೋಜನೆ ಅಡಿಯಲ್ಲಿ ತಲಾ 10 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಈ ಉಪಕ್ರಮವು ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಶನ್ನ ಸ್ವಚ್ಛ ಭಾರತ ಅಭಿಯಾನದ ಭಾಗವಾಗಿದ್ದು, ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಜನರ ನಡವಳಿಕೆಯಲ್ಲಿ ಬದಲಾವಣೆ ತರುವುದರೊಂದಿಗೆ ಅಕ್ಟೋಬರ್ 2019ರ ಒಳಗಾಗಿ ಭಾರತವನ್ನು ಬಾಹ್ಯ ಶೌಚ ಮುಕ್ತವನ್ನಾಗಿಸುವುದು ಇದರ ಮೂಲ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.