ನವದೆಹಲಿ: ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅನಿಲ್ ಬೈಜಾಲ್ ಅವರನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಪ್ರಧಾನಿ ಕಚೇರಿಯ ಶಿಫಾರಸ್ಸಿನ ಮೇರೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅನಿಲ್ ಬೈಜಾಲ್ ಅವರನ್ನು ನೇಮಕ ಮಾಡಿದ್ದಾರೆ.
ದೆಹಲಿಯ ನೂತನ ಲೆ. ಗವರ್ನರ್ ಅನಿಲ್ ಬೈಜಾಲ್ ಅವರನ್ನು ನಾನು ಸ್ವಾಗತಿಸುತ್ತೇನೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಾಷ್ಟ್ರಪತಿ ಮುಖರ್ಜಿ ಅವರು ನಜೀಬ್ ಜಂಗ್ ಅವರ ರಾಜೀನಾಮೆಯನ್ನು ಸ್ವೀಕರಿಸಿದರು.
ಭಾರತೀಯ ಆಡಳಿತ ಸೇವೆ (ಐಎಎಸ್)ಯ 1969ರ ತಂಡಲ್ಲಿ ಅಧಿಕಾರಿಯಾಗಿದ್ದ ಬೈಜಾಲ್ ಅವರು, ೨೦೦೪ರಲ್ಲಿ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
ಅವರು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ, ಭಾರತೀಯ ವಿಮಾನಯಾನದ ವ್ಯವಸ್ಥಾಪಕ ನಿರ್ದೇಶಕರಾಗಿ, ಗೋವಾ ಅಭಿವೃದ್ಧಿ ಅಧಿಕಾರಿಯಾಗಿ, ಪ್ರಸಾರ್ ಭಾರತಿ ಮತ್ತಿತರ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.