ನವದೆಹಲಿ : ಬಹುಕೋಟಿ ೨ಜಿ ಹಗರಣದ ಭಾಗವಾದ ಏರ್ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ತಮ್ಮ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಿವೆನ್ಶನ್ ಆಫ್ ಮನಿ ಲೆಂಡರಿಂಗ್ ಆಕ್ಟ್ ಅಡಿಯಲ್ಲಿ 2 ಜಿ ತರಂಗಾಂತರ ಹಗರಣವನ್ನು ತನಿಖೆ ನಡೆಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂಗೆ ಈಗಾಗಲೇ 3 ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಆದರೆ, ಸಮನ್ಸ್ಗೆ ಉತ್ತರಿಸದೇ, ವಿಚಾರಣೆಗೆ ಹಾಜರಾಗುವಲ್ಲಿ ಹಿಂದೇಟು ಹಾಕಿದ ಕಾರಣ ಜಾರಿ ನಿರ್ದೇಶನಾಲಯ ಈ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಏರ್ಸೆಲ್-ಮ್ಯಾಕ್ಸಿಸ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂಗೆ ಸಮನ್ಸ್ ಜಾರಿ ಮಾಡಿದ್ದು, ತಮ್ಮ ಸಂಸ್ಥೆಯ ಆರ್ಥಿಕ ವ್ಯವಹಾರಗಳ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ನೀಡುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದಾರೆ.
2015 ರಲ್ಲಿ ಚೆನೈ ಹೈಕೋರ್ಟ್ ಮೊರೆ ಹೋಗಿದ್ದ ಕಾರ್ತಿ ಚಿದಂಬರಂ, ಇಡಿ ಹೊರಡಿಸಿರುವ ಸಮನ್ಸ್ ಹಿಂತೆಗೆದುಕೊಳ್ಳಬೇಕು, ಮತ್ತು ತಮ್ಮ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಆದೇಶಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ತಮಗೆ ದುರುದ್ದೇಶದಿಂದ ಈ ಸಮನ್ಸ್ ನೀಡಲಾಗಿದೆ. ಈ ಸಮನ್ಸ್ ನೀಡುವಿಕೆಯೂ ಕೂಡಾ ಚಿದಂಬರಂ ಕುಟುಂಬಕ್ಕೆ ಕಿರುಕುಳ ನೀಡುವ ಉದ್ದೇಶ ಹೊಂದಿದೆ ಎಂದು ಅವರು ತಿಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.