ಲಖ್ನೌ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಹೋರಾಟದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು, ಉತ್ತರ ಪ್ರದೇಶದ ಜನತೆ ಅಭಿವೃದ್ಧಿಯನ್ನು ಬಯಸಿದ್ದಾರೆ. ಭಾರತೀಯ ಜನತಾ ಪಕ್ಷ ‘ಘರ್ ವಾಪಸಿ’ ಮಾಡಲಿದೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷದ ವೈಷಮ್ಯದ ಕುರಿತು, ಉತ್ತರ ಪ್ರದೇಶದ ಇತಿಹಾಸದಲ್ಲೇ ಇಂತಹ ವಾತಾವರಣಕ್ಕೆ ಎಂದೂ ಸಾಕ್ಷಿಯಾಗಿರಲಿಲ್ಲ. ಭಾರತದ ಅತಿ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ ಈವರೆಗೆ ಅಭಿವೃದ್ಧಿಯನ್ನು ಹೊಂದಿಲ್ಲ. ಬಿಜೆಪಿ ಉ.ಪ್ರದೇಶದಲ್ಲಿ ‘ಘರ್ ವಾಪಸಿ’ ಮೂಲಕ ಉತ್ತಮ ಆಡಳಿತ ನಡೆಸಲಿದೆ. ಬಿಜೆಪಿ ಉತ್ತರ ಪ್ರದೇಶದಲ್ಲಿ ಕೇವಲ ಸರ್ಕಾರವನ್ನು ಮಾತ್ರವಲ್ಲ, ಸಂಪೂರ್ಣ ಆಡಳಿತ ವ್ಯವಸ್ಥೆಯನ್ನು ಬದಲಿಸಲಿದೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ಕಾಂಗ್ರೆಸ್ ಪಕ್ಷ ಭಯಭೀತವಾಗಿವೆ. ಸಮಾಜವಾದಿ ಪಕ್ಷದಲ್ಲಿ ‘ದಂಗಲ್’ ನಡೆಯುತ್ತಿದೆ. ಉತ್ತರ ಪ್ರದೇಶ ‘ಮಂಗಲ್’ (ಶಾಂತಿ)ನ್ನು ಬಯಸಿದೆ. ‘ದಂಗಲ್’ನ್ನು ಅಲ್ಲ. ಅದು ಅಭಿವೃದ್ಧಿಯನ್ನು ಬಯಸಿದೆ ಎಂದು ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.