ನವದೆಹಲಿ : ಜನವರಿ 31 ರಿಂದ ಫೆಬ್ರವರಿ 9 ರ ವರೆಗೆ ಬಜೆಟ್ ಅಧಿವೇಶನ ಹಾಗೂ ಫೆಬ್ರವರಿ 1 ರಂದು ಸಾಮಾನ್ಯ ಬಜೆಟ್ ಮಂಡಿಸಲು ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸ್ಸು ಮಾಡಿದೆ.
ಸಂಸದೀಯ ವ್ಯವಹಾರಗಳ ಸಮಿತಿ ಸಭೆಯನ್ನು ನಡೆಸಿದ್ದು, ಜನವರಿ 31 ರಿಂದ ಫೆಬ್ರವರಿ 9 ರ ವರೆಗೆ ಬಜೆಟ್ ಅಧಿವೇಶನ ಹಾಗೂ ಫೆಬ್ರವರಿ 1 ರಂದು ಬಜೆಟ್ ಮಂಡಿಸಲು ಶಿಫಾರಸ್ಸು ಮಾಡಿದೆ. ಆರ್ಥಿಕ ಯೋಜನೆಗಳು ಹಾಗೂ ವಿವಿಧ ವಿಭಾಗಗಳಿಗೆ ಹಣಕಾಸು ಹಂಚಿಕೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಜನವರಿ 31 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಸಂಸತ್ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆಯೂ ಮಂಡನೆಯಾಗಲಿದೆ ಎನ್ನಲಾಗಿದೆ.
ಈ ಬಾರಿ ರೈಲ್ವೆ ಮತ್ತು ಸಾಮಾನ್ಯ ಬಜೆಟ್ ಒಟ್ಟಿಗೆ ಮಂಡನೆಯಾಗುತ್ತಿರುವುದು ವಿಶೇಷ. ಪ್ರತ್ಯೇಕ ರೈಲ್ವೆ ಬಜೆಟ್ ಮಂಡಿಸುವ 92 ವರ್ಷಗಳ ಪದ್ಧತಿ ಕೊನೆಯಾಗಲಿದೆ.
ಹೊಸ ಯೋಜನೆಗಳು, ತೆರಿಗೆ ನೀತಿ ಮತ್ತಿತರ ಬಜೆಟ್ ನಿರ್ಧಾರಗಳು, ಹಣಕಾಸು ಹಂಚಿಕೆ ಇವೆಲ್ಲವೂ ಆರ್ಥಿಕ ವರ್ಷ ಏಪ್ರಿಲ್ 1 ರಿಂದ ಜಾರಿಗೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಬಜೆಟ್ ಮಂಡನೆಯನ್ನು ಒಂದು ತಿಂಗಳು ಮೊದಲೇ ಮಂಡಿಸಲಾಗುತ್ತಿದೆ ಎನ್ನಲಾಗಿದೆ.
ಈ ಮೊದಲು ಫೆಬ್ರವರಿ ಮಾಸಾಂತ್ಯಕ್ಕೆ ಪ್ರಾರಂಭವಾಗುತ್ತಿದ್ದ ಬಜೆಟ್ ಅಧಿವೇಶನ ಈ ಬಾರಿ ಜನವರಿ ಮಾಸಾಂತ್ಯಕ್ಕೆ ಆರಂಭವಾಗುತ್ತಿದೆ. ಇದು ಭಾರತದ ಇತಿಹಾಸದಲ್ಲಿ ಮೊದಲಬಾರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.