ತಿರುಪತಿ: ಆಂಧ್ರ ಪ್ರದೇಶ ರಾಜ್ಯದ ನೊಬೆಲ್ ಪ್ರಶಸ್ತಿ ವಿಜೇತ ಯಾವುದೇ ವ್ಯಕ್ತಿಗೆ ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ತಿರುಪತಿಯ ಶ್ರೀ ಪದ್ಮಾವತಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ವಿದ್ಯಾರ್ಥಿಗಳು ತಮ್ಮ ಕೆಲಸವನ್ನು ಆನಂದಿಸಬೇಕು. ಮತ್ತು ಕಠಿಣ ಪರಿಶ್ರಮದಿಂದ ಅದನ್ನು ಸಾಧಿಸಬೇಕು ಎಂದು ಸಲಹೆ ನೀಡಿದ್ದಾರೆ.
ಸಣ್ಣ ಆವಿಷ್ಕಾರಗಳು ದೊಡ್ಡ ಸಂಶೋಧನೆಗಳಿಗೆ ಕಾರಣವಾಗಿವೆ ಎಂದು ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ನಾಯ್ಡು ಅವರು 2015ರ ನೊಬೆಲ್ ಪುರಸ್ಕೃತ ಜಪಾನ್ನ ಪ್ರೊ. ಟಕಾಕಿ ಕಜಿತಾ ಅವರನ್ನು ಸನ್ಮಾನಿಸಿದರು.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನಗಳ ಕೇಂದ್ರ ಸಚಿವ ವೈ.ಎಸ್. ಚೌಧರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.