ಹುಬ್ಬಳ್ಳಿ: ಉತ್ತರ ಕರ್ನಾಟಕದ ಮೊದಲ ಡಿಜಿಟಲ್ ಗ್ರಾಮ ಎಂಬ ಶ್ರೇಯಕ್ಕೆ ಹುಬ್ಬಳ್ಳಿಯ ಶೆರೆವಾಡ ಪಾತ್ರವಾಗಿದ್ದು, ಪ್ರಧಾನಿ ಮೋದಿಯವರ ಕನಸೊಂದು ಇಲ್ಲಿಯೂ ಚಿಗುರೊಡೆದಿದೆ.
ನ್ಯೂಸ್-13 ನೊಂದಿಗೆ ಮಾತನಾಡಿದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನ (ಧಾರವಾಡ) ಸಾರ್ವಜನಿಕ ಸಂಪರ್ಕಾಧಿಕಾರಿ ಉಲ್ಲಾಸ ಗುನಗಾ ಅವರು, ಧಾರವಾಡ ಜಿಲ್ಲೆಯಲ್ಲಿ 9 ಹಳ್ಳಿಗಳನ್ನು ಡಿಜಿಟಲ್ ಆಗಿ ಮಾರ್ಪಡಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದ್ದಾರೆ.
ಅದರ ಭಾಗವಾಗಿ ಹಳ್ಳಿಗಳಲ್ಲಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ. 4415 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ, 4003ಮಂದಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಖಾತೆ ಹೊಂದಿದ್ದಾರೆ. ಈ ಪೈಕಿ 3964 ಖಾತೆಗಳನ್ನು ಆಧಾರ್ ಜೊತೆಗೆ ಜೋಡಣೆ ಮಾಡಲಾಗಿದೆ. ೩೮೦೩ ರುಪೇ ಕಾರ್ಡ್ ಹಾಗೂ ಕಿಸಾನ್ ಕಾರ್ಡ್ ವಿತರಿಸಲಾಗಿದೆ ಎಂದೂ ಅವರು ತಿಳಿಸಿದರು.
ಡಿಜಿಟಲ್ ಗ್ರಾಮ ಎಂದು ಘೋಷಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಶ್ರೀವಾಸ್ತವ ಅವರು, ಶೆರೆವಾಡ ಗ್ರಾಮಸ್ಥರು ತಮ್ಮ ಮೊಬೈಲ್ ಮೂಲಕವೇ ಬ್ಯಾಂಕ್ ಖಾತೆಯ ವ್ಯವಹಾರಗಳನ್ನು ಮಾಡಬಹುದು. ಇ-ಪಾಸ್ ಬುಕ್ ಸೇವೆ ಪಡೆಯಬಹುದು. ಇನ್ನು ಆಯ್ದ ಮಳಿಗೆಗಳಿಗೆ ಶೀಘ್ರದಲ್ಲಿಯೇ ಪಿಒಎಸ್ ಮಷಿನ್ ಕೂಡಾ ವಿತರಿಸಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.