ನವದೆಹಲಿ : ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ರಾಜ್ಯಕ್ಕೆ 1,782.44 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ನವದೆಹಲಿಯಲ್ಲಿ ನಡೆಸಲಾದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭೀಕರ ಬರ ಹಾಗೂ ಮಳೆಯ ಕೊರತೆಯಿಂದಾಗಿ ತತ್ತರಿಸಿದ್ದ ಕರ್ನಾಟಕಕ್ಕೆ ಬರ ಪರಿಹಾರವಾಗಿ 1,782.44 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ್ದಾರೆ.
ಆಂತರಿಕ ಸಚಿವಾಲಯದ ತಂಡವು ಕರ್ನಾಟಕ ಮತ್ತು ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಬರ ಹಾಗೂ ಪ್ರವಾಹ ಕುರಿತಂತೆ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿದ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪಡೆ ನಿಧಿ ಹಾಗೂ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 1,782.44 ಕೋಟಿ ರೂ. ಹಾಗೂ ಉತ್ತರಾಖಂಡಕ್ಕೆ ರೂ. 208.91 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ.
ಉನ್ನತ ಮಟ್ಟದ ಸಭೆಯಲ್ಲಿ ನೀತಿ ಆಯೋಗ, ಹಣಕಾಸು, ಕೃಷಿ ವಿಭಾಗ, ಆಂತರಿಕ ಗೃಹ ಸಚಿವಾಲಯದ ಅಧಿಕಾರಿಗಳು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.