ನವದೆಹಲಿ: ಕೇಂದ್ರ ಬಜೆಟ್ ಮುಂದೂಡುವ ಕುರಿತು ಸಲ್ಲಿಸಿದ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲ ಎಂದು ಮುಖ್ಯ ನ್ಯಾ.ಜೆ.ಎಸ್.ಖೇಹರ್ ಇದ್ದ ಸುಪ್ರೀಂ ಪೀಠ ಹೇಳಿದೆ.
ಗೋವಾ, ಉತ್ತರಾಖಂಡ್, ಉತ್ತರಪ್ರದೇಶ, ಮಣಿಪುರ ಹಾಗೂ ಪಂಜಾಬ್ ಈ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಅದಕ್ಕೂ ಕೆಲದಿನಗಳ ಮುಂಚಿತವಾಗಿ ನಿಗದಿತವಾದ ಕೇಂದ್ರ ಬಜೆಟ್ ದಿನಾಂಕವನ್ನು ಮುಂದೂಡಬೇಕು, ಹಾಗೂ ಈ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕೆಂದು ನ್ಯಾಯವಾದಿ ಎಂ.ಎಲ್.ಶರ್ಮಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಫೆ. 4 ಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಫೆ.೧ ಕ್ಕೆ ಕೇಂದ್ರ ಬಜೆಟ್ ಮಂಡಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.