ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8 ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ರಾಜ್ ಪಿ. ತಿಳಿಸಿದ್ದಾರೆ.
ಶೋಭಾವನದಲ್ಲಿರುವ ಕಾಲೇಜಿನ ಕ್ಯಾಂಪಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾವೇಶದ ಕುರಿತು ಮಾಹಿತಿ ನೀಡಿದರು. ಜ. 8 ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ವಹಿಸಲಿದ್ದಾರೆ. ಕೇಂದ್ರಿಯ ಹೋಮಿಯೋಪಥಿ ಕೌನ್ಸಿಲ್ ಸದಸ್ಯ ಡಾ.ಶ್ರೀಕಾಂತ್ ಕೊಂಕಣಿ ಮುಖ್ಯ ಅತಿಥಿಯಾಗುತ್ತಾರೆ. ಭಾರತೀಯ ಹೋಮಿಯೋಪಥಿ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಡಾ.ಸುಧಿನ್ ಕುಮಾರ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಗೌರವ ಅತಿಥಿಗಳಾಗಿರುತ್ತಾರೆ ಎಂದು ತಿಳಿಸಿದರು.
‘ಚರ್ಮದ ಕಾಯಿಲೆಯಲ್ಲಿ ಹೋಮಿಯೋಪಥಿಯ ಪಾತ್ರ’ ಎಂಬ ವಿಷಯದ ಮೇಲೆ ಕೇರಳ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಸಜಿ ಕೆ. ಬೆಳಗ್ಗೆ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ ಕ್ಷಕಿರಣ, ಸಿಟಿಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್ ವಿಷಯದ ಕುರಿಯು ಯೆನೆಪೋಯ ವಿಶ್ವವಿದ್ಯಾಲಯದ ರೇಡಿಯೋಲಜಿ ವಿಭಾಗದ ಮುಖ್ಯಸ್ಥ ಡಾ.ದೇವ್ ದಾಸ್ ಆಚಾರ್ಯ ಉಪನ್ಯಾಸ ನೀಡಲಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳ ಹೋಮಿಯೋಪಥಿ ತಜ್ಞರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ.ಪ್ರವೀಣ್ ತಿಳಿಸಿದ್ದಾರೆ.
ಕಾಲೇಜಿನ ಉಪಪ್ರಾಂಶುಪಾಲ ಡಾ.ರೋಶನ್ ಪಿಂಟೋ, ಸಮಾವೇಶದ ಕಾರ್ಯದರ್ಶಿ ಡಾ.ರಾಖಾಲ್.ಪಿ, ಸಂಘದ ಸದಸ್ಯರಾದ ಡಾ.ವೈ.ಎಂ ಖಾದ್ರಿ, ಪ್ರಜ್ಞಾ ಆಳ್ವ ಪತ್ರಿಕಾಗೋಷ್ಠಿಯಲ್ಲಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.