ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ವಿರಾಸತ್ಗೆ ಪೂರಕವಾಗಿ ಆಳ್ವಾಸ್ ಶಿಲ್ಪ ವಿರಾಸತ್ ಹಾಗೂ ವರ್ಣವಿರಾಸತ್ ರಾಷ್ಟ್ರೀಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿರಿಯ ಚಿತ್ರಕಲಾವಿದರಿಗೆ ಕೊಡಮಾಡುವ ‘ಆಳ್ವಾಸ್ ವರ್ಣವಿರಾಸತ್’ 2017 ನೇ ಸಾಲಿನ ಪ್ರಶಸ್ತಿಗೆ ಪ್ರಸಿದ್ಧ ಚಿತ್ರಕಲಾವಿದ ರೇವ ಶಂಕರ್ ಶರ್ಮ ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇವ ಶಂಕರ್ ಶರ್ಮ:
1935 ಅಗಸ್ಟ್ 6 ರಂದು ರಾಜಸ್ಥಾನದ ನತ್ವಾರಾಮ್ ಎಂಬಲಿ ಜನಿಸಿದ ರೇವ ಶಂಕರ್ ಶರ್ಮರವರು ತಮ್ಮ 15 ನೇ ವರ್ಷದಿಂದಲೇ ಕಲಾಸಕ್ತಿಯನ್ನು ಬೆಳೆಸಿಕೊಂಡಿದ್ದಾರೆ. ಪಿಚ್ಚಾಯಿ ಎಂಬ ಸಾಂಪ್ರದಾಯಿಕ ಚಿತ್ರಕಲಾ ಶೈಲಿಯನ್ನು ತನ್ನ ತಂದೆ ಜಗನ್ನಾಥ ಶರ್ಮರವರಿಂದ ಕಲಿತು ಬಳಿಕ ಪ್ರಸಿದ್ಧ ಘರಾನಾ ದಿವಂಗತ ಲಕ್ಷ್ಮೀಲಾಲ್ಜಿಯವರಲ್ಲಿ ಉನ್ನತ ಅಭ್ಯಾಸವನ್ನು ಮಾಡಿದರು.
2011 ರಲ್ಲಿ ಹಾಗೂ 1981 ರಲ್ಲಿ ಚಿಕಣಿ ಚಿತ್ರಕಲೆಗೆ, 2013ರಲ್ಲಿ ಶಿಲ್ಪಕಲೆಗೆ, ರಾಷ್ಟ್ರ ಪ್ರಶಸ್ತಿ ಹಾಗೂ ಹಲವಾರು ರಾಜ್ಯ ಪ್ರಶಸ್ತಿಗಳನ್ನು ಪಡೆದ ಶ್ರೀಯುತರು ಭಾರತ ಸರಕಾರದ ಪ್ರತಿನಿಧಿಯಾಗಿ ಅಮೇರಿಕಾದ ವಿವಿಧ ಪ್ರಸಿದ್ಧ ನಗರಗಳಲ್ಲಿ ಹಾಗೂ ರಾಷ್ಟ್ರದ ಹಲವು ನಗರಗಳಲ್ಲಿ ತಮ್ಮ ಚಿಕಣಿ ಚಿತ್ರಕಲೆಯನ್ನು ಪ್ರದರ್ಶನ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.