ಧಾರವಾಡ: ಗದಗ ಜಿಲ್ಲೆಯ ಉಸ್ತುವಾರಿ ಸಚಿವ ಎಚ್ಕೆ ಪಾಟೀಲರು ಕಪ್ಪತ್ತಗುಡ್ಡದ ಉಳಿವಿಗಾಗಿ ಧ್ವನಿ ಎತ್ತಲಿ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಪಾಟೀಲ್ ಹೇಳಿದರು.
ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೀವ ವೈವಿಧ್ಯ ಹಾಗೂ ಅನೇಕ ಅಪರೂಪದ ಔಷಧೀಯ ಸಸ್ಯರಾಶಿ ಇರುವ ಕಪ್ಪತ್ತಗುಡ್ಡದ ಉಳಿವಿಗೆ ಜನಸಂಗ್ರಾಮ ಪರಿಷತ್, ಎನ್ಸಿಪಿಎನ್ಆರ್ ಹಾಗೂ ಸಮಾಜ ಪರಿವರ್ತನಾ ಸಮುದಾಯ ಬೆಂಬಲ ಸೂಚಿಸಿವೆ ಎಂದರು.
ಗದಗ, ಶಿರಹಟ್ಟಿ, ಮುಂಡರಗಿಯಲ್ಲಿ ಜನಸಾಮಾನ್ಯರಿಗೆ ಅಹಿಂಸಾತ್ಮಕ ತರಬೇತಿಯೊಂದಿಗೆ, ಅಹಿಂಸೆಯ ಕುರಿತೂ ಜಾಗೃತಿ ಮೂಡಿಸಲು ನಿರ್ಧರಿಸಿರುವುದಾಗಿ ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.