ಮುಂಬೈ : 2 ನೇ ಸ್ಕಾರ್ಪೀನ್ ಶ್ರೇಣಿಯ ಜಲಾಂತರ್ಗಾಮಿ ಖಂಡೇರಿ ಇಂದು (ಜ.12) ಲೋಕಾರ್ಪಣೆಗೊಂಡಿದೆ. ಮಡ್ಗಾಂವ್ ಡಾಕ್ ಯಾರ್ಡ್ನಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ಸಚಿವ ಸುಭಾಷ್ ಭಮ್ರೆ ಅವರು ಖಂಡೇರಿ ನೌಕೆಯನ್ನು ಲೋಕಾರ್ಪಣೆಗೊಳಿಸಿದರು.
ಭಾರತದ ಅತ್ಯಾಧುನಿಕ ಜಲಾಂತರ್ಗಾಮಿ ಖಂಡೇರಿಯನ್ನು ಮಡ್ಗಾಂವ್ ಡಾಕ್ ಶಿಪ್ ಬಿಲ್ಟರ್ಸ್ ಲಿಮಿಟೆಡ್ (ಎಂಡಿಎ) ಸಂಸ್ಥೆಯು ತಯಾರಿಸಿದೆ. ಇದು ಸ್ಕಾರ್ಪೀನ್ ಶ್ರೇಣಿಯ 2ನೇ ನೌಕೆಯಾಗಿದೆ. ನೌಕೆಯಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರ ವ್ಯವಸ್ಥೆ ಇದ್ದು, ಯಾವುದೇ ರೀತಿಯ ಬಾಹ್ಯ ಬೆದರಿಕೆಗಳನ್ನು ಇದು ತಡೆದು ಹೊಡೆದುರುಳಿಸಬಲ್ಲದು. ಖಂಡೇರಿಗೆ ಅತ್ಯಾಧುನಿಕ ಕ್ಷಿಪಣಿಗಳನ್ನು ನಿಯೋಜಿಸುವ ಯೋಜನೆ ಇದೆ. ಇದರಲ್ಲಿರುವ ರಾಡಾರ್ ವ್ಯವಸ್ಥೆಯಿಂದ ಶತ್ರುಗಳ ನೌಕೆಗಳ ಮೇಲೆ ನಿಖರವಾಗಿ ದಾಳಿ ಮಾಡಬಹುದು.
2 ನೇ ಸ್ಕಾರ್ಪೀನ್ ಶ್ರೇಣಿಯ ಜಲಾಂತರ್ಗಾಮಿ ಖಂಡೇರಿಯು ಕ್ಷಿಪಣಿ ದಾಳಿ ನಿರೋಧಕ ವ್ಯವಸ್ಥೆ ಹೊಂದಿದ್ದು, ಯಾವುದೇ ಕ್ಷಿಪಣಿಯನ್ನು ಗುರುತಿಸಿ ಹೊಡೆದುರುಳಿಸುವ ಸಾಮಥ್ಯ ಇದಕ್ಕಿದೆ.
ಡಿಸೆಂಬರ್ 2017 ರವರೆಗೂ ಖಂಡೇರಿ ಜಲಾಂತರ್ಗಾಮಿ ನೌಕೆಯನ್ನು ವಿವಿಧ ಪರೀಕ್ಷೆಗೊಳಪಡಿಸಲಾಗುವುದು. ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಿದ ನಂತರ 2 ನೇ ಸ್ಕಾರ್ಪೀನ್ ಶ್ರೇಣಿಯ ಜಲಾಂತರ್ಗಾಮಿ ಖಂಡೇರಿಯನ್ನು ಭಾರತೀಯ ಸೇನೆಗೆ ಸೇರ್ಪಡೆಗೊಳಿಸಲಾಗುತ್ತದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.