ನವದೆಹಲಿ: ಟಿವಿ ಹಾಗೂ ರೆಡಿಯೊ ಕಾರ್ಯಕ್ರಮಗಳ ವಿರುದ್ಧ ದೂರಿಗೆ ಸಂಬಂಧಿಸಿದಂತೆ ವ್ಯವಹರಿಸಲು ಸೂಕ್ತ ಶಾಸನಬದ್ಧ ವ್ಯವಸ್ಥೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಹೇಳಿದೆ.
ಮುಖ್ಯ ನ್ಯಾ.ಜೆ.ಎಸ್.ಖೆಹರ್ ಮತ್ತು ನ್ಯಾ.ಡಿ.ವೈ.ಚಂದ್ರಚೂಡ ಅವರಿದ್ದ ದ್ವಿಸದಸ್ಯ ಪೀಠ, ಕೇಬಲ್ ಟೆಲಿವಿಜನ್ ನೆಟ್ವರ್ಕ್ಸ್ ಆ್ಯಕ್ಟ್ನ ಕಲಂ 22ರ ಅಡಿಯಲ್ಲಿ ಅಧಿಕಾರ ಅನುಷ್ಠಾನಗೊಳಿಸುವಂತೆ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಮಂತ್ರಾಲಯಕ್ಕೆ ಸೂಚಿಸಿದೆ.
ಈ ರೀತಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯವಹರಿಸಲು ವ್ಯವಸ್ಥೆ ಇದೆ ಎಂದು ಕೇಂದ್ರವು ನ್ಯಾಯಾಲಯದ ಗಮನಕ್ಕೆ ತಂದಾಗ, ವ್ಯವಸ್ಥೆ ಇರಬಹುದು, ಆದರೆ ಅದರ ಪ್ರಯೋಜನವನ್ನು ಜನತೆ ಪಡೆಯಲು ಸೂಕ್ತ ಪ್ರಚಾರದ ಅವಶ್ಯಕತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.