ಕೋಲ್ಕತಾ: ಇಲ್ಲಿಯ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ನ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗವತ್ ಅವರು, ಆರ್ಎಸ್ಎಸ್ ಕೇವಲ ಹಿಂದೂ ಸಮುದಾಯವನ್ನು ಬಲಪಡಿಸುವಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.
ಆರ್ಎಸ್ಎಸ್ ಯಾವುದೇ ನಿರ್ದಿಷ್ಟ ಸಮುದಾಯದ ಆಸಕ್ತಿಗಳ ವಿರುದ್ಧ ಕೆಲಸ ಮಾಡುತ್ತಿಲ್ಲ. ಆರ್ಎಸ್ಎಸ್ ಯಾರ ವಿರೋಧಿಯೂ ಅಲ್ಲ. ಅದೂ ಕೇವಲ ಹಿಂದೂಗಳ ಸಬಲೀಕರಣ ಮತ್ತು ಏಕತೆಗಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
‘ನಮ್ಮನ್ನು ಯಾರಿಂದಲೂ ತಡೆಯಲು ಸಾಧ್ಯವೇ? ಯಾರಿಂದಲೂ ಸಾಧ್ಯವಿಲ್ಲ. ನಾವು ಈ ಕಾರ್ಯ ಮಾಡಬೇಕು ಮತ್ತು ನಾವು ಈ ಕಾರ್ಯವನ್ನು ಎಂದಿಗೂ ಮುಂದುವರೆಸಿಕೊಂಡು ಹೋಗಬೇಕು. ಕ್ರಿಯಾವಾದ ಹೆಚ್ಚಿಸಿ, ಅದು ಕೇವಲ ಉಪದೇಶಗಳಿಂದ ಹೆಚ್ಚಿಸಲು ಸಾಧ್ಯವಿಲ್ಲ’ ಎಂದು ಅವರು ತಮ್ಮ ಮಕರ ಸಂಕ್ರಾಂತಿ ಸಂದೇಶದಲ್ಲಿ ತಿಳಿಸಿದ್ದಾರೆ.
ಭಾಗವತ್ ಅವರು ಎಲ್ಲ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದು, ಸಂಘದ ಕಾರ್ಯಗಳ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಆರ್ಎಸ್ಎಸ್ ಈಗ ಎಲ್ಲ ಸಮಸ್ಯೆಗಳನ್ನು ಎದುರಿಸಿ ಕಾರ್ಯ ನಿರ್ವಹಿಸಲು ಆನಂದಿಸುತ್ತದೆ’ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.