ನವದೆಹಲಿ: ತ್ಯಾಜ್ಯ ನಿರ್ವಹಣೆ ಮತ್ತು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ಕೂ ಅನುಮತಿ ನೀಡುವುದಿಲ್ಲ ಎಂದು ನ್ಯಾಶನಲ್ ಗ್ರೀನ್ ಟ್ರಿಬ್ಯುನಲ್ (ರಾಷ್ಟ್ರೀಯ ಹಸಿರು ನ್ಯಾಯಮಂಡಳಿ) ಹೇಳಿದೆ.
ಅಭಿವೃದ್ಧಿಯು ವಾಸಯೋಗ್ಯಕ್ಕೆ ಸಂಬಂಧಿಸಿದ್ದಿರಲಿ, ಕೈಗಾರಿಕೆ ಅಥವಾ ವಾಣಿಜ್ಯ ಯಾವುದೇ ವಿಭಾಗಕ್ಕೆ ಸಂಬಂಧಿಸಿದ್ದಾಗಿರಲಿ ಮುನ್ಸಿಪಲ್ ತ್ಯಾಜ್ಯ ಹಾಗೂ ಚರಂಡಿ ವ್ಯವಸ್ಥೆ ಸರಿಯಾಗಿರಬೇಕು. ಇಂಥ ಯಾವುದೇ ಅಭಿವೃದ್ಧಿ ಯೋಜನೆ ಮಾಡುವಾಗ, ಪ್ರಾಧಿಕಾರ, ಸಚಿವಾಲಯ ಅಥವಾ ಸಂಬಂಧಿಸಿದ ಶಾಸನಬದ್ಧ ಅಧಿಕಾರಿಗಳು ಈ ಕುರಿತು ಸ್ಪಷ್ಟಪಡಿಸಬೇಕು ಎಂದು ಎನ್ಜಿಟಿ ಮುಖ್ಯ ನ್ಯಾ. ಸ್ವತಂತ್ರ ಕುಮಾರ್ ಹೇಳಿದರು.
ಮುನ್ಸಿಪಲ್ ಸಾಲಿಡ್ ವೇಸ್ಟ್ಸ್ (ಮ್ಯಾನೇಜ್ಮೆಂಟ್ ಆಂಡ್ ಹ್ಯಾಂಡಲಿಂಗ್) ರೂಲ್ಸ್-200 ಮತ್ತು 2016 ರ ಅನ್ವಯವೇ, ತ್ಯಾಜ್ಯ ನಿರ್ವಹಣೆ ಹಾಗೂ ಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು ಶಾನಸಬದ್ಧ ಹೊಣೆ ಎಂದು ಹಸಿರು ಪೀಠ ಹೇಳಿದೆ.
ಒಂದು ವೇಳೆ ಈ ರೀತಿಯ ಯಾವುದೇ ಕ್ರಮವನ್ನು ಕೈಗೊಳ್ಳದೇ ಅಭಿವೃದ್ಧಿ ಕಾರ್ಯಕ್ಕೆ ಮುಂದಾದರೆ, ಸಂಬಂಧಿಸಿದ ಪ್ರಾಧಿಕಾರ ಹಾಗೂ ಸರ್ಕಾರಕ್ಕೆ, ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ನಿಟ್ಟಿನಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಪಾಲಿಸಬೇಕು ಎಂದು ನೋಟಿಸ್ ಕೊಡಬೇಕಾಗುತ್ತದೆ ಎಂದು ಹಸಿರು ಪೀಠ ನ್ಯಾಯಾಲಯ ಹೇಳಿದೆ.
ಕಾನೂನಿನ ಅನ್ವಯ ತ್ಯಾಜ್ಯ ನಿರ್ವಹಣೆ ಕುರಿತು ವ್ಯವಸ್ಥೆ ಮಾಡದೇ ಇದ್ದಲ್ಲಿ, ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲು ಅನುಮತಿಯನ್ನೇ ಕೊಡುವುದಿಲ್ಲ ಎಂದು ಅವರು ಹೇಳಿದರು. ತ್ಯಾಜ್ಯ ನಿರ್ವಹಣೆಯ ನಿಯಮಗಳ ಉಲ್ಲಂಘನೆ ಕುರಿತು ಕುದ್ರತ್ ಸಂಧು ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಈ ಕುರಿತು ವಿವರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.