ನವದೆಹಲಿ: ಮಹಾತ್ಮ ಗಾಂಧಿ ಭಾವಚಿತ್ರವಿರುವ ಚಪ್ಪಲಿಗಳನ್ನು ಮಾರಾಟಕ್ಕಿಟ್ಟಿದ್ದ ಅಮೆಜಾನ್ ಸಂಸ್ಥೆಗೆ ಆರ್ಥಿಕ ವ್ಯವಹಾರ ಸಚಿವಾಲಯದ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮೊದಲು ಭಾರತದ ರಾಷ್ಟ್ರಧ್ವಜದ ಚಿತ್ರವಿರುವ ಡೋರ್ಮ್ಯಾಟ್ಗಳನ್ನು ಮಾರಾಟಕ್ಕಿಟ್ಟಿದ್ದ ಅಮೆಜಾನ್ಗೆ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಎಚ್ಚರಿಕೆ ನೀಡಿದ್ದರು. ಈ ಕುರಿತು ಅಮೆಜಾನ್ ಕ್ಷಮಾಪಣೆಯನ್ನೂ ಕೇಳಿತ್ತು.
ಭಾರತದ ರಾಷ್ಟ್ರ ಲಾಂಛನ ಮತ್ತು ಚಿಹ್ನೆಗಳನ್ನು ಬಳಸಿ ಪ್ರಚಾರದ ಗಿಮಿಕ್ ಚಾಳಿಯನ್ನು ಮುಂದುವರೆಸಿದ್ದ ಅಮೆಜಾನ್ಗೆ, ಎಚ್ಚರಿಕೆಯನ್ನು ಹಗುರವಾಗಿ ಪರಿಗಣಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಕ್ತಿಕಾಂತ್ ದಾಸ್ ಖಡಕ್ ಸಂದೇಶ ರವಾನಿಸಿದ್ದಾರೆ.
Amazon,better behave. Desist from being flippant about Indian symbols & icons. Indifference will be at your own peril.
— Shaktikanta Das (@DasShaktikanta) January 15, 2017
ದೇಶದ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚುತ್ತಿದೆ. ಅಮೆಜಾನ್ ಇನ್ನಾದರೂ ಪಾಠ ಕಲಿತರೆ ಅದಕ್ಕೇ ಒಳಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.