ಧಾರವಾಡ: ಜನವರಿ 26 ರಂದು ನವದೆಹಲಿಯ ರಾಜಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧಾರವಾಡದ ಕೆಲಗೇರಿಯ ಶ್ರೀ ದುರ್ಗಾದೇವಿ ಜಗ್ಗಲಿಗೆ ಮೇಳದ ಇಬ್ಬರು ಕಲಾವಿದರಿಗೆ ಭಾಗವಹಿಸುವ ಅವಕಾಶ ದೊರಕಿದೆ.
ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರಾಜ್ಯದ ಜನಪದ ಕಲೆಗಳನ್ನು ಬಿಂಬಿಸುವ ಸ್ತಬ್ಧ ಚಿತ್ರವನ್ನು ಈ ಬಾರಿ ಗಣರಾಜ್ಯೋತ್ಸವದಲ್ಲಿ ಪ್ರದರ್ಶಿಸಲು ಸಿದ್ಧತೆ ನಡೆಸಿದೆ.
ದೇಶದ 7 ರಾಜ್ಯಗಳಿಗೆ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರ ಪ್ರದರ್ಶಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ. ಕರ್ನಾಟಕವು ಸತತ 7ನೇ ಬಾರಿಗೆ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರ ಪ್ರದರ್ಶನ ಮಾಡುತ್ತಿದೆ.
ಧಾರವಾಡದ ಕೆಲಗೇರಿಯ ಜಗ್ಗಲಿಗೆ ಕಲಾವಿದರಾದ ಬಸಪ್ಪ ಹಂಚಿನಮನಿ ಹಾಗೂ ದೇವೇಂದ್ರ ಅವರು ಭಾಗವಹಿಸುತ್ತಿದ್ದಾರೆ. ಈಗಾಗಲೇ ನವದೆಹಲಿಯ ರಕ್ಷಣಾ ಸಚಿವಾಲಯದ ಶಿಬಿರದಲ್ಲಿ ಸ್ತಬ್ಧಚಿತ್ರ ತಾಲೀಮು ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.