ಪಾಟ್ನಾ: ಕಳೆದ ನವೆಂಬರ್ನಲ್ಲಿ ಉತ್ತರ ಪ್ರದೇಶದ ಕಾನ್ಪುರ್ದಲ್ಲಿ ನಡೆದಿದ್ದ ಭೀಕರ ರೈಲು ದುರಂತದ ಹಿಂದೆ ಪಾಕಿಸ್ಥಾನದ ಕೈವಾಡವಿದೆ ಎನ್ನಲಾಗುತ್ತಿದೆ.
ಆಂಗ್ಲ ಪತ್ರಿಕೆಯೊಂದು ಈ ಕುರಿತು ವರದಿ ಮಾಡಿದ್ದು, ಪಾಕ್ನ ಗುಪ್ತಚರ ಇಲಾಖೆ ಐಎಸ್ಐ ನೆರವಿನೊಂದಿಗೆ ಉಗ್ರಗಾಮಿಗಳು ಅಥವಾ ದುಷ್ಕರ್ಮಿಗಳು ಐಐಡಿ ಬಾಂಬ್ ಅಳವಡಿಸಿ ಹಳಿಯನ್ನು ಸ್ಫೋಟಿಸಿರಬಹುದು ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿರುವುದಾಗಿ ಹೇಳಿದೆ.
ದುರಂತ ನಡೆದ ಸ್ಥಳದಲ್ಲಿ ಅಧಿಕಾರಿಗಳಿಗೆ ಕೆಲವು ಸಂಶಯಾಸ್ಪದ ವಸ್ತುಗಳು ದೊರೆತಿದ್ದು, ಇವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದಾಗ ಅವು ಸುಧಾರಿತ ಸ್ಫೋಟಗಳು ಎಂದು ತಿಳಿದು ಬಂದಿದೆ. ಹೀಗಾಗಿ ಈ ಕೃತ್ಯದಲ್ಲಿ ಪಾಕ್ ಕೈವಾಡ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಈಗಾಗಲೇ ಮೂವರು ಶಂಕಿತರನ್ನು ಬಂಧಿಸಿದ್ದು, ವಿಚಾರಣೆಯ ವೇಳೆ ಬಂಧಿತರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಪಾಕ್ ಕೈವಾಡ ಇರುವ ಕುರಿತು ಬಾಯಿ ಬಿಟ್ಟಿದ್ದಾರೆ ಎಂದು ಬಿಹಾರ್ ಎಸ್ಪಿ ಜಿತೇಂದ್ರ ರಾಣಾ ಹೇಳಿರುವುದಾಗಿ ವರದಿಯಲ್ಲಿ ಹೇಳಲಾಗಿದೆ.
ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದ್ದು, ಇನ್ನಷ್ಟೇ ಅಧಿಕೃತ ಹೇಳಿಕೆಗಳು ಪ್ರಕಟವಾಗಬೇಕಿದೆ.
ಇಂದೋರ್ – ಪಾಟ್ನಾ ನಡುವೆ ಸಂಚರಿಸುತ್ತಿದ್ದ ಇಂದೋರ್- ರಾಜೇಂದ್ರ ನಗರ ಎಕ್ಸಪ್ರೆಸ್ ರೈಲು ಉತ್ತರ ಪ್ರದೇಶದ ಕಾನ್ಪುರದ ಫುಖ್ರಾಯನ್ ಸಮೀಪ ದುರಂತಕ್ಕೀಡಾಗಿತ್ತು. 140 ಮಂದಿ ಸಾವನ್ನಪ್ಪಿ, 250ಕ್ಕೂ ಹೆಚ್ಚು ಜನ ಈ ಘಟನೆಯಲ್ಲಿ ಗಾಯಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.