ನವದೆಹಲಿ: ಕಾಶ್ಮೀರಿ ಪಂಡಿತರಿಗಾಗಿ ಜಮ್ಮು ಕಾಶ್ಮೀರದಲ್ಲಿ ಯಾವುದೇ ಪ್ರತ್ಯೇಕ ಟೌನ್ಶಿಪ್ ನಿರ್ಮಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಈ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಲೋಕಸಭೆಯಲ್ಲಿ ಉತ್ತರಿಸಿರುವ ಗೃಹಖಾತೆ ರಾಜ್ಯ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧುರಿ, ಜಮ್ಮು ಕಾಶ್ಮೀರದಲ್ಲಿ ಪಂಡಿತರಿಗೆ ಪ್ರತ್ಯೇಕ ವಲಯ ಸ್ಥಾಪಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
ಈ ಮೂಲಕ ಕಾಶ್ಮೀರದಲ್ಲಿ ಪಂಡಿತರಿಗಾಗಿ ಕೇಂದ್ರ ಪ್ರತ್ಯೇಕ ವಲಯ ಸ್ಥಾಪಿಸಲಿದೆ ಎಂಬ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
ವಿರೋಧ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪ್ರತ್ಯೇಕತಾವಾದಿಗಳು ಪ್ರತ್ಯೇಕ ಟೌನ್ಶಿಪ್ಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.