ನವದೆಹಲಿ: ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಸಾಯನಿಕ ಮತ್ತು ಗೊಬ್ಬರ ಸಚಿವ ಅನಂತ ಕುಮಾರ್ ಅವರು, ಸಾರ್ವಜನಿಕ ಸ್ವಾಮ್ಯದ ಭಾರತೀಯ ಔಷಧಿ ಮಂಡಳಿ ಮತ್ತು ರಾಷ್ಟ್ರೀಯ ಯುವ ಸಹಕಾರ ಸಂಘದ ನಡುವೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಮಾ.2017 ರ ವೇಳೆಗೆ ಮಿಷನ್-3000 ದೇಶಾದ್ಯಂತ 3000 ಕೇಂದ್ರಗಳನ್ನು ತೆರೆಯುವ ಯೋಜನೆಯ ಭಾಗವಾಗಿ ಈ ಯೋಜನೆ ಜಾರಿಗೆ ಬಂದಿದೆ.
ದೇಶದ ಜನತೆಗೆ ಕೈಗೆಟಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿ ದೊರಕಿಸುವ ನಿಟ್ಟಿನಲ್ಲಿ ಈ ಕೇಂದ್ರ ಸರ್ಕಾರ ಈ ನಿರ್ಣಯ ಕೈಗೊಂಡಿದೆ. ಸರ್ಕಾರ ಪ್ರತಿ ತಾಲೂಕು ಮತ್ತು ಗ್ರಾಮ ಪಂಚಾಯ್ತಿಗಳಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸುವ ಯೋಜನೆ ಹೊಂದಿದೆ ಎಂದು ಅನಂತಕುಮಾರ್ ಹೇಳಿದ್ದಾರೆ.
ಔಷಧಿ ವಿಭಾಗದ ಕಾರ್ಯದರ್ಶಿ ಜೈ ಪ್ರಿಯೆ ಒಪ್ರಕಾಶ್, ಬಿಪಿಪಿಐ ಸಿಇಒ ಬಿಪ್ಲಾಬ್ ಚಟರ್ಜ ಹಾಗೂ ಇತರರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.