ನವದೆಹಲಿ: ಶಿಕ್ಷಣ ತಜ್ಞರು, ಬುದ್ಧಿಜೀವಿಗಳು, ಪ್ರಮುಖ ಅಧಿಕಾರಿಗಳು ಹಾಗೂ ಮುಸ್ಲಿಂ ಉಲೇಮಾಗಳನ್ನೊಳಗೊಂಡ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಪ್ರಧಾನಿ ಮೋದಿ ಅವರ ಜೊತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಯುವ ಜನತೆ ತೀವ್ರಗಾಮಿತ್ವವನ್ನು ಪ್ರತಿರೋಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಯಶಸ್ಸು ಭಾರತದ ಸುದೀರ್ಘ ಪರಂಪರೆಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಭಾರತದ ಸಾಸ್ಕೃತಿ, ಸಂಪ್ರದಾಯ, ಸಾಮಾಜಿಕ ಚೌಕಟ್ಟು ಭಯೋತ್ಪಾದಕರು, ಭಯೋತ್ಪಾದನೆಯ ಪ್ರಾಯೋಜಕರಿಗೆ ಯಶಸ್ವಿಯಾಗಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಡತನದ ವಿರುದ್ಧ ಏಳಿಗೆ, ಸಬಲೀಕರಣಕ್ಕೆ ಶಿಕ್ಷಣ, ಕೌಶಲ್ಯ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ಅವರು ಒತ್ತಾಯಿಸಿದ್ದಾರೆ.
ವಿವಿಧ ನಾಯಕರನ್ನೊಳಗೊಂಡ ನಿಯೋಗ ಕೇಂದ್ರ ಸರ್ಕಾರವು ಅಭಿವೃದ್ಧಿ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳ ಸಬಲೀಕರಣಕ್ಕೆ ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದೆ.
ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಹೋರಾಡಲು ಪ್ರಧಾನಿ ಮೋದಿ ಅವರ ಕ್ರಮಗಳಿಗೆ ತಮ್ಮ ಬೆಂಬಲವನ್ನು ವಿಸ್ತರಿಸಿರುವ ನಿಯೋಗ, ಭ್ರಷ್ಟಾಚಾರ ವಿರುದ್ಧದ ಹೋರಾಟ ಬಡ ಜನರು, ಅಲ್ಪಸಂಖ್ಯಾತರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.