ನವದೆಹಲಿ: ದೆಹಲಿ ಪೊಲೀಸ್ ಆಯುಕ್ತ ಅಲೋಕ್ ವರ್ಮಾ ಅವರನ್ನು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯ ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಅವರು ಮುಂದಿನ ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಾಧೀಶ ಜಗದೀಶ್ ಸಿಂಗ್ ಖೆಹರ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನೊಳಗೊಂಡ ತ್ರಿಸದಸ್ಯರ ಆಯ್ಕೆ ಸಮಿತಿ ವರ್ಮಾ ಅವರ ನೇಮಕ ಮಾಡಿದೆ.
ಫೆಬ್ರವರಿ ೨೯, ೨೦೧೬ರಲ್ಲಿ ಅಲೋಕ್ ವರ್ಮಾ ಅವರು ದೆಹಲಿ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿದ್ದರು. ಅವರು ಜುಲೈ 2017ರ ವರೆಗೆ ಈ ಹುದ್ದೆಗೆ ನೇಮಕಗೊಂಡಿದ್ದರು.
ಅನಿಲ್ ಸಿನ್ಹಾ ಅವರು ಡಿ.2ರಂದು ಸಿಬಿಐ ನಿರ್ದೇಶಕ ಹುದ್ದೆಯಿಂದ ನಿವೃತ್ತಿ ಪಡೆದ ಬಳಿಕ ಈ ಸ್ಥಾನ ಖಾಲಿ ಉಳಿದಿತ್ತು.
ಗುಜರಾತ್ ಪೊಲೀಸ್ ಪಡೆಯ ಐಪಿಎಸ್ ಅಧಿಕಾರಿ ರಾಕೇಶ್ ಆಸ್ಥಾನ ಪ್ರಸ್ತುತ ಸಿಬಿಐ ಮಧ್ಯಂತರ ನಿರ್ದೆಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.