ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಡಿಜಿಟಲ್ ಬ್ಯಾಂಕಿಂಗ್ ಪ್ರೋತ್ಸಾಹಿಸಲು ಆನ್ಲೈನ್ ವ್ಯವಹಾರಗಳ ವೆಚ್ಚ ಕಡಿಮೆಗೊಳಿಸುವ ಯೋಜನೆ ರೂಪಿಸುವಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿರುವುದಾಗಿ ಸಂಸತ್ ಸಮಿತಿ ಸದಸ್ಯರು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.
ಆರ್ಬಿಐ ಆನ್ಲೈನ್ ವ್ಯವಹಾರಗಳ ವೆಚ್ಚ ಕಡಿಮೆಗೊಳಿಸುವ ತಂತ್ರದ ಮೇಲೆ ಕೆಲಸ ನಿರ್ವಹಿಸುತ್ತಿದೆ. ಅದು ಎಲ್ಲ ಮಧ್ಯಸ್ಥಗಾರರ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಉರ್ಜಿತ್ ಪಟೇಲ್ ಅವರು ಹೇಳಿರುವುದಾಗಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ ತಿಳಿಸಿದ್ದಾರೆ.
ಉರ್ಜಿತ್ ಪಟೇಲ್ ಅವರು ನವೆಂಬರ್ 8ರಂದು 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳ ರದ್ದತಿ ಹಾಗೂ ಅನಂತರ ಶೇ.86ರಷ್ಟು ಹೊಸ ನೋಟುಗಳ ಚಲಾವಣೆಯ ಕುರಿತ ಸಮಿತಿಯ ಪ್ರಶ್ನೆಗಳಿಗೆ ಉತ್ತರಿಸುತ್ತ ಈ ವಿಷಯ ತಿಳಿಸಿರುವುದಾಗಿ ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.