ಪಾಟ್ನಾ: ಮಹಿಳೆಯರು, ಪುರುಷರು ಹಾಗೂ ಮಕ್ಕಳು ಸೇರಿದಂತೆ ಲಕ್ಷಾಂತರ ಜನ ಬಿಹಾರದಲ್ಲಿ ಶನಿವಾರ ರಾಜ್ಯ ಸರ್ಕಾರದ ಮದ್ಯ ನಿಷೇಧ ನೀತಿಯನ್ನು ಬೆಂಬಲಿಸಿ ಮಾನವ ಸರಪಳಿ ನಿರ್ಮಿಸಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ಕುಮಾರ್, ಮೈತ್ರಿ ಪಕ್ಷದ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್, ಕಾಂಗ್ರೆಸ್ ಮುಖಂಡರು ಹಾಗೂ ವಿರೋಧ ಪಕ್ಷ ಬಿಜೆಪಿ ಮುಖಂಡರು ಇದರಲ್ಲಿ ಭಾಗಿಯಾಗಿದ್ದಾರೆ.
ಮದ್ಯ ನಿಷೇಧ ಬೆಂಬಲಿಸಿ ವಿಶ್ವದಲ್ಲೇ ಹಿರಿದಾದ ಅಂದರೆ 11,000 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸುತ್ತಿರುವುದಾಗಿ ಬಿಹಾರ ಮುಖ್ಯ ಕಾರ್ಯದರ್ಶಿ ಅಂಜನಿಕುಮಾರ್ ಸಿಂಗ್ ಹೇಳಿದ್ದಾರೆ.
ಈ ಅಪರೂಪದ ಸರಪಳಿಯ ಚಿತ್ರ ದಾಖಲಿಸಲು ಒಂದು ವಿದೇಶಿ ಮತ್ತು ಎರಡು ಇಸ್ರೋ ಉಪಗ್ರಹಗಳು, ನಾಲ್ಕು ವಿಮಾನಗಳು, ಎರಡು ಹೆಲಿಕಾಪ್ಟರ್ ಮತ್ತು 40 ಡ್ರೋನ್ ಬಳಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 12:15 ರಿಂದ 1 ಗಂಟೆ ಅವಧಿ ನಡುವೆ ಅಂದಾಜು 20 ದಶಲಕ್ಷ ಜನ ಈ ಮಾನವ ಸರಪಳಿಗೆ ಕೈಜೋಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
2016ರ ಎಪ್ರಿಲ್ನಲ್ಲಿ ಮುಖ್ಯಮಂತ್ರಿ ನಿತೀಶ್ಕುಮಾರ್ ಮಧ್ಯ ನಿಷೇಧಿಸಿ ಆದೇಶ ಹೊರಡಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.