ಕೊಲ್ಕತ್ತಾ : ದೇಶದ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಿ ಮೋದಿ ಅವರು ಉತ್ತಮ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಸೀಮಿತ ದಾಳಿ ಹಾಗೂ ನೋಟು ನಿಷೇಧ ಸ್ವಾಗಾತರ್ಹ ನಡೆ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ಖಾಸಗಿ ಪತ್ರಿಕೆಯೊಂದು ನಡೆಸಿದ್ದ ರಾಷ್ಟ್ರೀಯ ವಿಚಾರಗಳ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ನಾನು ಮೋದಿ ಅವರನ್ನು ಸಮರ್ಥಿಸಿಕೊಳ್ಳಲು ಈ ಮಾತನ್ನು ಹೇಳುತ್ತಿಲ್ಲ, ಮೋದಿಯವರಿಂದ ನನಗೆ ಏನನ್ನೂ ಪಡೆಯುವ ಅಪೇಕ್ಷೆಯೂ ಇಲ್ಲ. ದೇಶಕ್ಕೆ ಅವರಿಂದ ಒಳಿತನ್ನು ಬಯಸುತ್ತಿರುವೆ ಅಷ್ಟೆ ಎಂದಿದ್ದಾರೆ.
ನಾನೊಬ್ಬ ಅಂತಾರಾಷ್ಟ್ರೀಯ ಭಿಕ್ಷುಕ. ಭಿಕ್ಷುಕನಾಗಿ ರಾಜನ ಬಳಿ ಭಿಕ್ಷೆ ಬೇಡುವುದಿಲ್ಲ. ಮೋದಿಯವರು ದೇಶದ ಹಿತ ಕಾಪಾಡುವ ನಿಟ್ಟಿನಲ್ಲಿ ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. 27 ಕೋಟಿ ಭಾರತೀಯರು ಬ್ಯಾಂಕ್ ಖಾತೆ ತೆರೆಯಲು ಪ್ರೋತ್ಸಾಹ ನೀಡಿದ್ದಾರೆ. ಅವರ ಯಾವ ಯೋಜನೆಗಳೂ ಮತಬ್ಯಾಂಕ್ ಉದ್ದೇಶ ಹೊಂದಿವೆ ಎನಿಸುವುದಿಲ್ಲ. ಆದ್ದರಿಂದ ಅವರನ್ನು ಇನ್ನಷ್ಟು ಉತ್ತಮ ಕೆಲಸ ಮಾಡಲು ಬಿಡಬೇಕು ಎಂದು ಅವರು ಹೇಳಿದ್ದಾರೆ.
ಭಾರತೀಯ ಸೇನಯು ಸರಿಯಾಗಿಯೇ ಕೆಲಸ ಮಾಡುತ್ತಿದೆ ಎಂದ ಅವರು, ನಮ್ಮ ದೇಶದಲ್ಲಿರುವ ಬಡತನ, ಅಪೌಷ್ಟಿಕತೆ, ಹಸಿವು ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕಿದೆ. ಆಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.