ಚೆನ್ನೈ: ಇಲ್ಲಿಯ ಮರೀನಾ ಬೀಚ್ನಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಜಲ್ಲಿಕಟ್ಟು ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ತಂಡ ಸೋಮವಾರ ಮುಂಜಾನೆ 5 ಗಂಟೆಗೆ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪ್ರಯತ್ನಿಸಿದ್ದಾರೆ.
ಈ ಸಂದರ್ಭ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಅಶ್ರುವಾಯು ಹಾಗೂ ಲಾಠಿ ಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ.
ಜಲ್ಲಿಜಕಟ್ಟು ನಿಷೇಧಿಸಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ವಿರುದ್ಧ ತಮಿಳುನಾಡು ರಾಜ್ಯ ಸರ್ಕಾರ ಸುಜ್ರಿವಾಜ್ಞೆ ಹೊರಡಿಸಿದ್ದರ ಹೊರತಾಗಿ ಪ್ರತಿಭಟನಾಕಾರರು ಪ್ರತಿಭಟನೆ ಮುಂದುವರೆಸಿದ್ದು, ಗಣರಾಜ್ಯೋತ್ಸವ ಆಚರಣೆಯನ್ನು ತಡೆಯುವುದಾಗಿ ಬೆದರಿಕೆ ಹಾಕಿದ್ದಾರೆ.
ಪ್ರತಿಭಟನೆ ಕೈಬಿಡುವಂತೆ ಪೊಲೀಸರು ನೀಡಿದ್ದ ಆದೇಶವನ್ನು ನಿರಾಕರಿಸಿದ ಪ್ರತಿಭಟನಾಕಾರರು, ಇದಕ್ಕೆ ತಾತ್ಕಾಲಿಕ ಪರಿಹಾರವಲ್ಲ ಶಾಶ್ವತ ಕಾನೂನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಭಾನುವಾರ ತಮಿಳುನಾಡಿನ ಹಲವೆಡೆ ಜಲ್ಲಿಕಟ್ಟು ಆಯೋಜಿಸಲಾಗಿದ್ದು, ಇಬ್ಬರು ಸಾವನ್ನಪಪಿದ್ದು, ಇನ್ನೋರ್ವ ವ್ಯಕ್ತಿ ಪ್ರತಿಭಟನೆ ವೇಳೆ ಸಾವನ್ನಪ್ಪಿರುವುದಾಗಿ ಮೂಲಗಳು ತಿಳಿಸಿವೆ.
ಈ ಸುಗ್ರೀವಾಜ್ಞೆ ಕಾನೂನು ರೂಪಕ್ಕೆ ತರಲು ಆರು ತಿಂಗಳ ಅವಕಾಶವಿದ್ದು, ಸೋಮವಾರ ಆರಂಭಗೊಳ್ಳಲಿರುವ ವಿಧಾನಸಭೆ ಅಧಿವೇಶನದಲ್ಲಿ ಂಗೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಪನ್ನೀರಸೆಲ್ವಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.