ಹೈದರಾಬಾದ್: ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ತಮಿಳುನಾಡಿನಲ್ಲಿ ಈಗಲೂ ಪ್ರತಿಭಟನೆ ನಡೆಯುತ್ತಿರುವುದನ್ನು ಗಮನಿಸಿದರೆ ಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಚಿವ ಎಂ.ವೆ ಂಕಯ್ಯ ನಾಯ್ಡು ಹೇಳಿದರು.
ಜಲ್ಲಿಕಟ್ಟಿಗಾಗಿ ನಡೆಸುತ್ತಿದ್ದ ಪ್ರತಿಭಟನೆ ಈಗ ಹಿಂಸಾಚಾರ ರೂಪ ತಾಳಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಈ ಪ್ರತಿಭಟನೆಯನ್ನು ತಮ್ಮ ದುರುಪಯೋಗಕ್ಕೆ ತೆಗೆದುಕೊಳ್ಳಲು ಕೆಲ ಪಕ್ಷಗಳು ಯತ್ನಿಸುತ್ತಿವೆ. ಕೂಡಲೇ ತಮಿಳುನಾಡಿನ ಜನತೆ ತಮ್ಮ ಪ್ರತಿಭಟನೆ ಹಿಂತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷಗಳ ವಿರುದ್ಧ ಹರಿಹಾಯ್ದಿರುವ ಅವರು, ವಿಪಕ್ಷಗಳು ಜನತೆಯಲ್ಲಿ ಕೇಂದ್ರ ವಿರೋಧಿ ಮನೋಭಾವನೆ ಹುಟ್ಟುಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ತಮಿಳುನಾಡು ಸರ್ಕಾರ ಈ ಕ್ರೀಡೆಗೆ ಕುರಿತಂತೆ ಶಾಸನಕ್ಕೆ ಅನುಮೋದನೆ ನೀಡಿದ್ದು, ಜನ ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದೂ ಸಚಿವ ನಾಯ್ಡು ವಿನಂತಿಸಿದ್ದಾರೆ.
ಪೊಲೀಸರ ಕ್ರಮ ಸ್ವಾಗತಿಸಿದ ಸ್ವಾಮಿ
ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ಬಳಿಕವೂ ತಮಿಳುನಾಡಿನಲ್ಲಿ ಪ್ರತಿಭಟನೆ ಎಲ್ಲೆ ಮೀರಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ಕ್ರಮ ಕೈಗೊಂಡಿರುವುದನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವಾಗತಿಸಿದ್ದಾರೆ.
ತಮಿಳುನಾಡಿನ ಜನತೆಯ ಆಗ್ರಹವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡ ಬಳಿಕವೂ ಪ್ರತಿಭಟನೆ ನಡೆದರೆ ಅದು ಅರ್ಥಹೀನ. ಕಾರಣ ಪೊಲೀಸರ ಕ್ರಮ ಸರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆ ಹೆಸರಿನಲ್ಲಿ ಕೆಲವರು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು,ಪ್ರತಿಭಟನೆ ಆಯೋಜಿಸಿದ್ದ ತಮಿಳು ಗಾಯಕರೇ ಪ್ರತಿಭಟನೆ ಕೈಬಿಟ್ಟಿದ್ದಾರೆ ಎಂದು ಸ್ವಾಮಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.