ನವದೆಹಲಿ: 2017ನೇ ಸಾಲಿನ ಕೇಂದ್ರ ಬಜೆಟ್ನ್ನು ಫೆ.1ರಂದು ನಡೆಸಲು ಚುನಾವಣಾ ಆಯೋಗ ಷರತ್ತುಬದ್ಧ ಅನುಮತಿಸಿದ್ದು, ಆದರೆ ಚುನಾವಣೆ ನಡೆಯಲಿರುವ 5 ರಾಜ್ಯಗಳಿಗೆ ಬಜೆಟ್ನಲ್ಲಿ ಯಾವುದೇ ಹೊಸ ಯೋಜನೆಗಳ ಘೋಷಣೆ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಆಯೋಗ ಸೂಚನೆಗಳನ್ನು ನೀಡಿದ್ದು, ಚುನಾವಣೆ ನಡೆಯಲಿರುವವ 5 ರಾಜ್ಯಗಳಲ್ಲಿ ನಡೆಸುವ ಪ್ರಚಾರ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವರು ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸುವಂತಿಲ್ಲ ಎಂದು ಹೇಳಿದೆ.
ನಿಷ್ಪಕ್ಷವಾದ ಮತ್ತು ನ್ಯಾಯಯುತ ಚುನಾವಣೆ ನಡೆಸಲು ಚುನಾವಣೆ ನಡೆಯಲಿರುವ ೫ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಪರಿಣಾಮ ಈ ರಾಜ್ಯಗಳಲ್ಲಿ ಯಾವುದೇ ನಿರ್ದಿಷ್ಟ ಯೋಜನೆಗಳನ್ನು ಘೋಷಿಸುವಂತಿಲ್ಲ ಎಂದು ಆಯೋಗ ತನ್ನ ಸೂಚನೆಯಲ್ಲಿ ತಿಳಿಸಿದೆ.
ಮುಂದಿನ ಫೆಬ್ರವರಿ 4ರಿಂದ ಮಾರ್ಚ್ 8ರ ವರೆಗೆ ಈ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.