ವಾಸ್ಕೋ: ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಆಡಳಿತಾರೂಢ ಯಾದವ್ ಕುಟುಂಬದ ಕೌಟುಂಬಿಕ ಕಲಹಗಳು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಹಗರಣಗಳ ದೋಷಪೂರಿತ ಅಧಿಕಾರಾವಧಿಯ ಅರಾಜಕತೆಯಿಂದ ಮತದಾರರ ಗಮನ ಬೇರೆಡೆಗೆ ಸೆಳೆಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಗೋವಾದ ವಾಸ್ಕೋದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಶಾ ಅವರು, 5 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೌಟುಂಬಿಕ ಕಲಹದಿಂದ ಭೂ ಕಬಳಿಕೆ, ಗೂಂಡಾರಾಜ್, ಮಾಫಿಯಾ, ಭ್ರಷ್ಟಾಚಾರವನ್ನು ಮರೆಮಾಚಲು ಸಾಧ್ಯವಿಲ್ಲ. ಉತ್ತರ ಪ್ರದೇಶ ಹಲವು ಹಗರಣಗಳು, ವಂಚನೆಗಳು ಮತ್ತು ಕಳಪೆ ಆಡಳಿತಕ್ಕೆ ಈಡಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.