ನವದೆಹಲಿ: ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಮಂಗಳವಾರ ರಾತ್ರಿ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತಕ್ಕೆ ಭೇಟಿ ನೀಡುವಂತೆ ಟ್ರಂಪ್ಗೆ ಮೋದಿ ಆಹ್ವಾನಿಸಿದ್ದಾರೆ.
ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಒಟ್ಟಾಗಿ ಕೆಲಸ ನಿರ್ವಹಿಸಲು ಉಭಯ ನಾಯಕರು ನಿರ್ಧರಿಸಿದ್ದೇವೆ ಎಂದು ಪ್ರಧಾನಿ ಮೋದಿ ಅವರು ಸರಣಿ ಟ್ವೀಟ್ಗಳ ಮೂಲಕ ತಿಳಿಸಿದ್ದಾರೆ. ಇದೇ ವೇಳೆ ಟ್ರಂಪ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿರುವುದಾಗಿ ಮೋದಿ ಅವರು ಟ್ವೀಟ್ ಮೂಲಕ ತಿಳಿದ್ದಾರೆ.
ಈ ವೇಳೆ ಟ್ರಂಪ್ ಅವರು ಪ್ರಧಾನಿ ಮೋದಿ ಅವರನ್ನು ಅಮೇರಿಕಾಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದು, ಭಾರತ ಅಮೇರಿಕಾದ ನಿಜವಾದ ಸ್ನೇಹಿತ. ವಿಶ್ವದಾದ್ಯಂತ ಎಲ್ಲ ಸವಾಲುಗಳನ್ನು ಎದುರಿಸಲು ಭಾರತ ತನ್ನ ಪಾಲುದಾರ ಎಂದು ಅಮೇರಿಕಾ ಪರಿಗಣಿಸುತ್ತದೆ ಎಂದು ಟ್ರಂಪ್ ಒತ್ತಿ ಹೇಳಿದ್ದಾರೆ.
ಮಾತುಕತೆ ವೇಳೆ ಉಭಯ ನಾಯಕರು ದಕ್ಷಿಣ ಮತ್ತು ಮಧ್ಯ ಏಷ್ಯಾದ ಭದ್ರತಾ ಸವಾಲುಗಳನ್ನು ಎದುರಿಸಲು ಹಾಗೂ ಜಾಗತಿಕ ಸವಾಲಾಗಿರುವ ಭಯೋತ್ಪಾದನೆ ವಿರುದ್ಧ ಭುಜಕ್ಕೆ ಭುಜ ಕೊಟ್ಟು ಹೋರಾಡುವ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಶ್ವೇತಭವನದ ಪ್ರಕಟಣೆ ತಿಳಿಸಿದೆ.
ಸೌಹಾರ್ದ ಸಂಬಂಧಗಳ ಜೊತೆ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮತ್ತು ರಕ್ಷಣೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾರತ ಭೇಟಿ ನೀಡುವಂತೆ ಟ್ರಂಪ್ಗೆ ಆಹ್ವಾನಿಸಿದ್ದು, ಅಧ್ಯಕ್ಷತೆ ವಹಿಸಿರುವುದ್ದಕ್ಕಾಗಿ ಟ್ರಂಪ್ ಅವರಿಗೆ ಶುಭಾಶಯ ಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.