ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಸನಿಹ ಬಂದ ಸನ್ನಿವೇಶದಲ್ಲಿ, ಬಿಜೆಪಿಗೆ ಬಾಲಿವುಡ್ ತಾರೆಯೊಬ್ಬರು ಸೇರ್ಪಡೆಗೊಂಡಿದ್ದಾರೆ.
2003 ರಲ್ಲಿ ಹಂಗಾಮಾ ಎಂಬ ಹಾಸ್ಯ ಪ್ರಧಾನ ಚಿತ್ರದ ಮೂಲಕ ಬಾಲಿವುಡ್ಗೆ ಪ್ರವೇಶ ಪಡೆದಿದ್ದ ನಟಿ ರಿಮಿ ಸೇನ್ ಈಗ ಕಮಲದ ಮೊರೆ ಹೋಗಿದ್ದಾರೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್ ಹಾಗೂ ಮಣಿಪುರ ಚುನಾವಣೆಗೂ ಮುನ್ನವೇ ನಟಿ ಬಿಜೆಪಿಗೆ ಬಂದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಬಿಜೆಪಿ ಸೇರಿದ ನಂತರ ಮಾತನಾಡಿದ ನಟಿ ರಿಮಿ ಸೇನ್, ನಾನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ಫೂರ್ತಿಗೊಂಡಿರುವೆ. ಪಕ್ಷದಲ್ಲಿ ಕೊಡುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ಹೇಳಿದ್ದಾರೆ.
ಬುಧಿಯಾ ಸಿಂಗ್- ಬಾರ್ನ್ ಟು ರನ್ ಎಂಬ ಚಿತ್ರವನ್ನೂ ನಿರ್ಮಿಸಿದ್ದ ಇವರು, 2015 ರಲ್ಲಿ ಬಿಗ್ಬಾಸ್ ರಿಯಾಲಿಟಿ ಶೋಗೆ ಸ್ಪರ್ಧಿಯಾಗಿ ಹೋಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.