ನವದೆಹಲಿ: ‘ರಾಷ್ಟ್ರೀಯ ಮತದಾರರ ದಿನ’ದ ಅಂಗವಾಗಿ ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರು, ಚುನಾವಣೆಗಳು ಪ್ರಜಾಪ್ರಭುತ್ವದ ಆಚರಣೆಗಳು. ಅದು ಜನರ ಇಚ್ಛೆಗಳನ್ನು ತಿಳಿಸಿಸುತ್ತವೆ ಎಂದು ಬುಧವಾರ ಹೇಳಿದ್ದಾರೆ.
‘ರಾಷ್ಟ್ರೀಯ ಮತದಾರರ ದಿನವಾದ ಇಂದು ದೇಶದ ಜನತೆಗೆ ಶುಭ ಕೋರುತ್ತೇನೆ. ಚುನಾವಣಾ ಆಯೋಗಕ್ಕೆ ಶುಭಾಶಯ ಕೋರುತ್ತಿದ್ದು, ದೇಶದ ಪ್ರಜಾಪ್ರಭುತ್ವದಲ್ಲಿ ತಮ್ಮ ಪ್ರಮುಖ ಪಾತ್ರಕ್ಕಾಗಿ ವಂದಿಸುತ್ತೇನೆ. ಚುನಾವಣೆಗಳು ಪ್ರಜಾಪ್ರಭುತ್ವದ ಆಚರಣೆಗಳು. ಅದು ಜನರ ಇಚ್ಛೆಗಳನ್ನು ತಿಳಿಸಿಸುತ್ತವೆ. ಅವು ನಮ್ಮ ಪ್ರಜಾಪ್ರಭುತ್ವದಲ್ಲಿ ಸರ್ವೋಚ್ಚ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಅರ್ಹ ಮತದಾರರು ತಮ್ಮ ಮತಗಳನ್ನು ಹಾಕುವಂತೆ ಮನವಿ ಮಾಡಿದ ಅವರು, ಹದಿಹರೆಯದವರು 18 ವರ್ಷ ತಲುಪುತ್ತಿದ್ದಂತೆ ಮತದಾರರಾಗಿ ನೋಂದಾಯಿಸುವಂತೆ ಹೇಳಿದ್ದಾರೆ.
ಚುನಾವಣಾ ಆಯೋಗ (ಇಸಿ) ಇಂದು ದೇಶಾದ್ಯಂತ 7ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತಿದೆ. ಚುನಾವಣಾ ಪ್ರಕ್ರಿಯೆಗಳಲ್ಲಿ ನಾಗರಿಕರ ಭಾಗವಹಿಸುವಿಕೆ ಹೆಚ್ಚಿಸಲು ಶ್ರಮಿಸುತ್ತಿದೆ.
ಚುನಾವಣಾ ಪ್ರಕ್ರಿಯೆಗಳಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಮತ್ತಿತರ ಕಾರ್ಯಕರ್ತರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಜನವರಿ 25ನ್ನು ಚುನಾವಣಾ ಆಯೋಗದ ಸ್ಥಾಪನಾ ದಿನವಾಗಿ ಗುರುತಿಸಲಾಗಿದ್ದು,. ಅದು 1950ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.