ಪಂಚಕುಲ: ಭದ್ರತಾ ಸಿಬ್ಬಂದಿಗಳ ವಿವಿಧ ವಾರ್ಡ್ಗಳಿಗೆ ಹಾಗೂ ಅರೆಸೇನಾ ಪಡೆಗಳಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಮತ್ತು ಹರ್ಯಾಣ ಲೋಕಸೇವಾ ಆಯೋಗ (ಎಚ್ಪಿಎಸ್ಸಿ) ಆಯೋಜಿಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಸೌಲಭ್ಯವನ್ನು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖತ್ತಾರ್ ಘೋಷಿಸಿದ್ದಾರೆ.
ಗಣರಾಜ್ಯೋತ್ಸವದ ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತ ಸೈನಿಕರ ಮಕ್ಕಳಿಗೆ ಐಎಎಸ್, ಐಪಿಎಸ್, ಎಚ್ಪಿಎಸ್, ಇಂಜಿನಿಯರಿಂಗ್, ವೈದ್ಯಕೀಯ, ಎನ್ಡಿಎ ಮತ್ತು ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಒದಗಿಸಲು ಬಜೆಟ್ ಹಂಚಿಕೆಯಲ್ಲಿ 3 ಕೋಟಿ ರೂ. ಯೋಜನೆ ತಯಾರಿಸಲಾಗಿದೆ ಎಂದು ಅವರು ಹೇಳಿದರು.
ಈ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ಸೈನಿಕರ ಕಲ್ಯಾಣ ಯೋಜನೆಗಳ ಬಗ್ಗೆ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಅವರು, ಹುತಾತ್ಮ ಸೈನಿಕರು ದೇಶದ ಏಕತೆ ಮತ್ತು ಸಮಗ್ರತೆಗಾಗಿ ಪ್ರಾಣ ತ್ಯಾಗ ಮಾಡಿದರು ಎಂದು ಹೇಳಿದರು.
ಹರ್ಯಾಣ ಸರ್ಕಾರ ಮಾಜಿ ಸೈನಿಕರಿಗೆ ವಿವಿಧ ಸೇವೆಗಳನ್ನು ಒದಗಿಸಲು ಸೈನಿಕ ಕಲ್ಯಾಣ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿದೆ. ದೆಹ್ರಾಡೂನ್ನ ರಾಷ್ಟ್ರೀಯ ಭಾರತೀಯ ಸೇನಾ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿರುವ ಕೆಡೆಟ್ಗಳ ವಾರ್ಷಿಕ ವಿದ್ಯಾರ್ಥಿವೇತನವನ್ನು 35,000ದಿಂದ 50,000ಕ್ಕೆ ಹೆಚ್ಚಿಸಲಾಗಿದೆ ಎಂದು ಖತ್ತಾರ್ ಹೇಳಿದರು.
ಜನರು ತಮ್ಮ ಮನೆ ಬಾಗಿಲ್ಲಲ್ಲೇ ವಿವಿಧ ಸೇವೆಗಳನ್ನು ಪಡೆಯಲು ಸರ್ಕಾರ 170 ಇ-ಸೇವೆಗಳ 23 ಇಲಾಖೆಗಳನ್ನು ಪರಿಚಯಿಸಿದೆ ಎಂದು ಅವರು ಈ ಸಂದರ್ಭ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.