ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಮುಸ್ಲಿಂ ಸಂಘಟನೆಯೊಂದು, ಸಾಮೂಹಿಕ ವಿವಾಹದಲ್ಲಿ ವಧು ವರರ ಕೈಯಲ್ಲಿ ರಾಷ್ಟ್ರಧ್ವಜ ನೀಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ್ದು, ಇದನ್ನು ’ರಿಪಬ್ಲಿಕ್’ ಮದುವೆ ಎನ್ನಬಹುದೇನೋ.
ಇಲ್ಲಿನ ಹುಸೈನಿ ವಕ್ಫ್ ಸಮಿತಿ ಗಣರಾಜ್ಯೋತ್ಸವ ನಿಮಿತ್ತ ಸಾಮೂಹಿಕ ವಿವಾಹವನ್ನು ಏರ್ಪಡಿಸಿತ್ತು. ಅದರಲ್ಲಿ 101 ಮುಸ್ಲಿಂ ಜೋಡಿಗಳು ನೂತನ ಜೀವನಕ್ಕೆ ಕಾಲಿಟ್ಟರು. ಈ ಸಂದರ್ಭದಲ್ಲಿ ದಂಪತಿಗಳು ರಾಷ್ಟ್ರಧ್ವಜವನ್ನು ಹಿಡಿದುಕೊಳ್ಳುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ್ದು ವಿಶಿಷ್ಟವಾಗಿದೆ.
ಕಳೆದ 10 ವರ್ಷಗಳಿಂದ ಸಾಮೂಹಿಕ ವಿವಾಹವನ್ನು ಏರ್ಪಡಿಸುತ್ತ ಬಂದಿರುವ ಈ ಸಮಿತಿ, ಈ ಬಾರಿ ಗಣರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಿದ್ದು ಎಲ್ಲರ ಗಮನ ಸೆಳೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.