ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಜಿಎಸ್ಟಿ(ಸರಕು ಮತ್ತು ಸೇವೆ ತೆರಿಗೆ) ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.
ಈ ಮಸೂದೆಯ ಪರವಾಗಿ 336ಮಂದಿ ಮತ ಚಲಾಯಿಸಿದರು, 11 ಮಂದಿ ವಿರುದ್ಧವಾಗಿ ಮತ ಚಲಾಯಿಸಿದರು. 10 ಮಂದಿ ಗೈರು ಹಾಜರಾಗಿದ್ದರು. 2/3ನೇ ಬಹುಮತದ ಮೂಲಕ ಮಸೂದೆ ಅಂಗೀಕಾರಗೊಂಡಿದೆ ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅಂಗೀಕರಿಸಿದ್ದಾರೆ.
ಈ ಮಸೂದೆ ದೀರ್ಘಾವಧಿಯಲ್ಲಿ ಬೆಲೆಗಳನ್ನು ಕಡಿಮೆಗೊಳಿಸುತ್ತದೆ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜನ ಕೊಡುತ್ತದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.