ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹಾತ್ವಾಕಾಂಕ್ಷೆಯ ಯೋಜನೆ ಸ್ವಚ್ಛ ಭಾರತ ಅಭಿಯಾನಕ್ಕೆ ಬಾಲಿವುಡ್ ಸುಂದರಿ ಅನುಷ್ಕಾ ಶರ್ಮಾ ಸಾಥ್ ನೀಡಲಿದ್ದಾರೆ. 28 ವರ್ಷದ ನಟಿ ಅನುಷ್ಕಾ ಶರ್ಮಾ, ಮಹಿಳೆಯರಲ್ಲಿ ಈ ಅಭಿಯಾನದ ಕುರಿತು ಜಾಗೃತಿ ಮೂಡಿಸುವ ಹೊಣೆ ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮುಂಬೈ ಮಿರರ್ ವರದಿ ಮಾಡಿದ್ದು, ಸರ್ಕಾರವು ಸ್ವಚ್ಛ ಭಾರತ ಅಭಿಯಾನದ ಪ್ರಚಾರಕ್ಕಾಗಿ ಅನುಷ್ಕಾ ಶರ್ಮಾರನ್ನು ಆಯ್ಕೆ ಮಾಡಿದೆ. ದೃಶ್ಯ ಮಾಧ್ಯಮಗಳಲ್ಲಿ ಅವಳ ಸ್ಫೂರ್ತಿದಾಯಕ ನಟನೆಯನ್ನು ಪರಿಗಣಿಸಿದೆ.
ಸ್ವಚ್ಛತೆ, ಆರೋಗ್ಯಕರ ಜೀವನ, ಬಹಿರ್ದೆಸೆ ಮುಕ್ತ ಸಮಾಜ ನಿರ್ಮಾಣವೇ ಈ ಅಭಿಯಾನದ ಮೂಲ ಧ್ಯೇಯ. ಬಿಗ್ಬಿ ಅಮಿತಾಬ್ ಬಚ್ಚನ್ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದಾರೆ.
2014ರ ಅ.2 ರಂದು ಗಾಂಧಿ ಜಯಂತಿ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಈ ಅಭಿಯಾನವನ್ನು ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.